ಸಮಾಜಮುಖಿ ಕೆಲಸದಿಂದ ಜೀವನ ಮೌಲ್ಯಗಳ ಅರಿವು

blm
Published on

ಕಾರ್ಕಳ: ವಿದ್ಯಾರ್ಥಿಗಳು ಜೀವನವನ್ನು ಗಂಭೀರವಾಗಿ ಪರಿಗಣಿಸಬೇಕು. ಪ್ರತಿಯೋರ್ವ ವಾನವನೂ ಸವಾಜಮುಖಿ ಕೆಲಸಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳುವುದು ಅತ್ಯಗತ್ಯ. ಇದರಿಂದ ಜೀವನದ ಮೌಲ್ಯಗಳನ್ನು ಕಲಿಯಬಹುದಾಗಿದೆ ಎಂದು ಆಳ್ವಾಸ್ ಎಜುಕೇಶನ್ ಫೌಂಡೇಶನ್‌ನ ಟ್ರಸ್ಟಿ ವಿವೇಕ್ ಆಳ್ವ ಹೇಳಿದರು.

ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನೆ ಟಕದ 2025-26ನೇ ಸಾಲಿನ ಚಟುವಟಿಕೆಗಳನ್ನು ಬುಧವಾರ ಸಂಭ್ರಮ್ ಸಭಾಂಗಣದಲ್ಲಿ ಉದ್ಘಾಟಿಸಿ ವಾತನಾಡಿದರು.

ಪ್ರಾಂಶುಪಾಲ ಡಾ.ನಿರಂಜನ್ ಎನ್.ಚಿಪ್ಳೂಣ್ಕರ್ ಅಧ್ಯಕ್ಷತೆ ವಹಿಸಿದ್ದರು. ನಿಟ್ಟೆ ಪರಿಗಣಿತ ವಿಶ್ವವಿದ್ಯಾಲಯದ ಎನ್‌ಎಸ್‌ಎಸ್ ಸಂಯೋಜಕ ಶಶಿಕುವಾರ ಶೆಟ್ಟಿ ಮಾತನಾಡಿದರು. ನಿಕಟಪೂರ್ವ ಎನ್‌ಎಸ್‌ಎಸ್ ಅಧಿಕಾರಿ ಶ್ರೀನಿವಾಸ ನೆಕ್ಕಾರ್ ಅವರನ್ನು ಗೌರವಿಸಲಾಯಿತು.

ವಿದ್ಯಾರ್ಥಿನಿ ಮೇಘಾ, ಅನುಷಾ ಅತಿಥಿಗಳನ್ನು ಪರಿಚಯಿಸಿದರು. ಎನ್‌ಎಸ್‌ಎಸ್ ಅಧಿಕಾರಿ ಡಾ.ಧನಂಜಯ ಬಿ. ಸ್ವಾಗತಿಸಿದರು. ಎನ್‌ಎಸ್‌ಎಸ್ ವಿದ್ಯಾರ್ಥಿ ಅಧ್ಯಕ್ಷೆ ಶರಣ್ಯಾ ವಂದಿಸಿದರು. ವಿದ್ಯಾರ್ಥಿನಿ ಸ್ಫೂರ್ತಿ ಬೈಲೂರು ನಿರೂಪಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net