ಪೆಟ್ರೋಲಿಯಂ ಉತ್ಪನ್ನ ಸಂರಕ್ಷಣೆ ಅರಿವು

DSC_0753
Published on

ಮೈಸೂರು: ಪೆಟ್ರೋಲಿಯಂ ಉತ್ಪನ್ನಗಳ ಮಿತಬಳಕೆ ಹಾಗೂ ಸಂರಕ್ಷಣೆ ಬಗ್ಗೆ ಜನರಲ್ಲಿ ಅರಿವು ಮೂಡಿಸಲು ಭಾರತ್ ಪೆಟ್ರೋಲಿಯಂ ಕಾರ್ಪೋರೇಷನ್ ಲಿಮಿಟೆಡ್(ಬಿಪಿಸಿಎಲ್) ಹಮ್ಮಿಕೊಂಡಿರುವ ಸಕ್ಷಮ್ ಅಭಿಯಾನ ಪ್ರಯುಕ್ತ ನಗರದಲ್ಲಿ ಭಾನುವಾರ ಸೈಕ್ಲೋಥಾನ್ ನಡೆಯಿತು.

ನಗರದ ಕೋಟೆ ಆಂಜನೇಯಸ್ವಾಮಿ ದೇವಸ್ಥಾನದ ಆವರಣದಲ್ಲಿ ಪಾಲಿಕೆ ಆಯುಕ್ತ ಗುರುದತ್ತ ಹೆಗಡೆ ಸೈಕ್ಲೋಥಾನ್‌ಗೆ ಚಾಲನೆ ನೀಡಿದರು. ಸೈಕ್ಲೋಥಾನ್ ಕೆ.ಆರ್.ವೃತ್ತ, ಸಯ್ಯಜಿರಾವ್ ರಸ್ತೆ, ಸಂಸ್ಕೃತ ಪಾಠಶಾಲಾ ವೃತ್ತ, ಜೆಎಸ್‌ಎಸ್ ಮಹಾವಿದ್ಯಾಪೀಠ, ಗನ್‌ಹೌಸ್ ವೃತ್ತ, ಹಾರ್ಡಿಂಜ್ ವೃತ್ತದ ಮೂಲಕ ಸಾಗಿ ಕೋಟೆ ಆಂಜನೇಯಸ್ವಾಮಿ ದೇವಸ್ಥಾನದ ಆವರಣದಲ್ಲಿ ಅಂತ್ಯಗೊಂಡಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net