

ಗದಗ: ವಿದ್ಯಾರ್ಥಿಗಳಲ್ಲಿ ಕಂಡುಬರುವ ನೂನ್ಯತೆಗಳನ್ನು ಪಾಲಕರು ಬಾಲ್ಯದಲ್ಲಿಯೇ ಗುರುತಿಸಿ, ತಜ್ಞ ವೈದ್ಯರನ್ನು ಸಂಪರ್ಕಿಸಿ ಚಿಕಿತ್ಸೆ ಕೊಡಿಸಿದರೆ ಮಕ್ಕಳು ಸುಧಾರಣೆಗೊಂಡು ಸಾಮಾನ್ಯ ಮಕ್ಕಳಾಗುವ ಸಾಧ್ಯತೆಯಿದೆ ಎಂದು ಗದಗ ಬೆಟಗೇರಿ ಲಯನ್ಸ್ ಕ್ಲಬ್ ಅಧ್ಯಕ್ಷ ನಿತೀಶ್ ಸಾಲಿ ಹೇಳಿದರು. ಗುರುವಾರ ಕ್ಷೇತ್ರ ಶಿಕ್ಷಣಾಧಿಕಾರಿ ಕಾರ್ಯಾಲಯ ಹಾಗೂ ಗದಗ ಬೆಟಗೇರಿ ಲಯನ್ಸ್ ಕ್ಲಬ್ ಸಂಯುಕ್ತ ಆಶ್ರಯದಲ್ಲಿ ಗದಗ ಒಕ್ಕಲಗೇರಿಯ ಸರ್ಕಾರಿ ಶಾಲೆಯಲ್ಲಿ ಹಮ್ಮಿಕೊಂಡಿದ್ದ ವಿಶೇಷ ಚೇತನ ಮಕ್ಕಳಿಗಾಗಿ ಪರಿಸರ ನಿರ್ಮಾಣ ಹಾಗೂ ಸಮನ್ವಯ ಕುರಿತು ಹಮ್ಮಿಕೊಂಡಿದ್ದ ಅರಿವು ಸಮಾರಂಭದಲ್ಲಿ ಮಾತನಾಡಿದರು.
ವಿಶೇಷ ಚೇತನರು ಸಮಾಜದ ಮುಖ್ಯವಾಹಿನಿಗೆ ಬರಬೇಕು. ಅವರಿಗೆ ಸೂಕ್ತ ಪ್ರೋತ್ಸಾಹದ ಅಗತ್ಯವಿದೆ. ಸರ್ಕಾರದ ಸೌಲಭ್ಯಗಳೊಂದಿಗೆ ಸೂಕ್ತ ವಾತಾವರಣ ಅವಶ್ಯ ಎಂದರು. ಕವಿತಾ ಬೆಲೇರಿ, ವೈ.ಎಚ್. ಹನುಮಂತಗೌಡ್ರ ಇತರರಿದ್ದರು.