ಗರ್ಭಕಂಠದ ಕ್ಯಾನ್ಸರ್ ಮಾರಕ : ಪ್ರಾಧ್ಯಾಪಕಿ ಡಾ.ಮರಿಯಾ ನೆಲ್ಲಿಯನಿಲ್ ಕಳವಳ

Published on

ಮೂಡುಬಿದಿರೆ: ದೇಶದಲ್ಲಿ ಪ್ರಸ್ತುತ ಬಾಧಿಸುತ್ತಿರುವ ಕ್ಯಾನ್ಸರ್‌ಗಳ ಪಟ್ಟಿಯಲ್ಲಿ ಗರ್ಭಕಂಠದ ಕ್ಯಾನ್ಸರ್ ಎರಡನೇ ಸ್ಥಾನದಲ್ಲಿದ್ದು, ಪ್ರತಿ 8 ನಿಮಿಷಕ್ಕೆ ಒಬ್ಬ ಮಹಿಳೆ ಬಲಿಯಾಗುತ್ತಿದ್ದಾಳೆ ಎಂದು ಎ.ಜೆ. ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಮತ್ತು ಸಂಶೋಧನಾ ಕೇಂದ್ರದ ಸಮುದಾಯ ವೈದ್ಯಕೀಯ ವಿಭಾಗದ ಪ್ರಾಧ್ಯಾಪಕಿ ಡಾ.ಮರಿಯಾ ನೆಲ್ಲಿಯನಿಲ್ ಹೇಳಿದರು.

ಗರ್ಭಕಂಠದ ಕ್ಯಾನ್ಸರ್ ಮತ್ತು ಎಚ್‌ಪಿವಿ (ಹ್ಯೂಮನ್ ಪ್ಯಾಪಿಲೋಮ ವೈರಸ್) ಲಸಿಕೆ ಕುರಿತು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ವಿದ್ಯಾಗಿರಿಯ ಡಾ.ವಿ.ಎಸ್.ಆಚಾರ್ಯ ಸಭಾಂಗಣದಲ್ಲಿ ಮೂಡುಬಿದಿರೆ ರೋಟರಿ ಕ್ಲಬ್ ಸಹಯೋಗದಲ್ಲಿ ಇತ್ತೀಚೆಗೆ ಆಯೋಜಿಸಲಾದ ಕಾರ್ಯಕ್ರಮದಲ್ಲಿ ವಾತನಾಡಿದರು. ಕಾಲೇಜಿನ ಡಾ.ಶಿವರಾಮ ಕಾರಂತ ವೇದಿಕೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಎ.ಜೆ. ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಮತ್ತು ಸಂಶೋಧನಾ ಕೇಂದ್ರದ ಸಮುದಾಯ ವೈದ್ಯಕೀಯ ವಿಭಾಗದ ಸಹ ಪ್ರಾಧ್ಯಾಪಕಿ ಡಾ.ಸುಶಾಂತ ಪೆರ್ಡೂರು, ಆಳ್ವಾಸ್ ಆರೋಗ್ಯ ಕೇಂದ್ರದ ಸ್ತ್ರೀರೋಗ ತಜ್ಞೆ ಡಾ.ಹನಾ ಶೆಟ್ಟಿ ಸಂಪನ್ಮೂಲ ವ್ಯಕ್ತಿಯಾಗಿದ್ದರು.

ಮೂಡುಬಿದಿರೆ ರೋಟರಿ ಕ್ಲಬ್‌ನ ಕಾರ‌್ಯದರ್ಶಿ ರತ್ನಾಕರ್ ಜೈನ್ ಉಪಸ್ಥಿತರಿದ್ದರು. ಸ್ನಾತಕೋತ್ತರ ಇಂಗ್ಲಿಷ್ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಐಶ್ವರ್ಯ ಎಂ.ಎನ್. ಮತ್ತು ಸಮನ್ ಸೈಯ್ಯದ್ ನಿರೂಪಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net