ಅರ್ಹರು ಪಿಎಂಎವೈ ಅಡಿ ಅರ್ಜಿ ಸಲ್ಲಿಸಿ, ಪುರಸಭೆ ಅಧ್ಯಕ್ಷೆ ರೇಖಾ ಹೇಳಿಕೆ

Awareness program
ಕಾರಟಗಿಪ ಪಟ್ಟಣದಲ್ಲಿ ಪಿಎಂಎವೈ ಕುರಿತಾದ ಜಾಗೃತಿ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಪುರಸಭೆ ಅಧ್ಯಕ್ಷೆ ರೇಖಾ ರಾಜಶೇಖರ ಆನೆಹೊಸೂರು, ಉಪಾಧ್ಯಕ್ಷೆ ದೇವಮ್ಮ ಗಂಗಪ್ಪ, ಸ್ಥಾಯಿ ಸಮಿತಿ ಅಧ್ಯಕ್ಷ ಈಶಪ್ಪ, ಮುಖ್ಯಾಧಿಕಾರಿ ಸಾಬಣ್ಣ ಕಟ್ಟಿಕಾರ್ ಇದ್ದರು.
Published on

ಕಾರಟಗಿ: ಪ್ರಧಾನಮಂತ್ರಿ ಆವಾಸ್ ಯೋಜನೆಯಡಿ ಮನೆ ನಿರ್ಮಾಣ ಮಾಡಿಕೊಳ್ಳಲು 2.0 ಅಡಿಯಲ್ಲಿ ಅರ್ಹ ಫಲಾನುಭವಿಗಳು ಅರ್ಜಿ ಸಲ್ಲಿಸುವಂತೆ ಪುರಸಭೆ ಅಧ್ಯಕ್ಷೆ ರೇಖಾ ರಾಜಶೇಖರ ಆನೆಹೊಸೂರು ಹೇಳಿದರು.

ಪಟ್ಟಣದ ಪುರಸಭೆ ಕಚೇರಿ ಆವರಣದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಪಿಎಂಎವೈ ಕುರಿತ ಜಾಗೃತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

ಪಿಎಂಎವೈ 2.0 ಅಡಿ (ನಗರ) ನಾಲ್ಕು ಯೋಜನೆಗಳನ್ನು ಜಾರಿಗೊಳಿಸಲಾಗಿದೆ. ಸ್ವಂತ ಮನೆ ನಿರ್ಮಾಣ ಮಾಡಿಕೊಳ್ಳಬೇಕು ಎನ್ನುವವರು ಫಲಾನುಭವಿ ನೇತೃತ್ವದ ನಿರ್ಮಾಣ ವಸತಿ ಯೋಜನೆ (ಬಿಎಲ್‌ಸಿ), ಪಾಲುದಾರಿಕೆಯಲ್ಲಿ ಕೈಗೆಟುಕುವ ಬಹುಮಹಡಿ ವಸತಿ ಯೋಜನೆ (ಎಎಚ್‌ಪಿ), ಕೈಗೆಟಕುವ ಬಾಡಿಗೆ ವಸತಿ ಯೋಜನೆ (ಎಆರ್‌ಎಚ್), ಬಡ್ಡಿ ಸಹಾಯಧನ (ಸಬ್ಸಿಡಿ) ವಸತಿ ಯೋಜನೆ (ಐಎಸ್‌ಎಸ್) ಅಡಿ ಅರ್ಜಿ ಸಲ್ಲಿಕೆಗೆ ಜು.15 ಅಂತಿಮ ದಿನವಾಗಿದೆ. ಮಹಿಳಾ ಫಲಾನುಭವಿ ಹಾಗೂ ಹೆಸರಿನಲ್ಲಿ ಅರ್ಜಿ ಸಲ್ಲಿಸಬೇಕು ಎಂದರು.

ಪುರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ಈಶಪ್ಪ ಇಟ್ಟಂಗಿ, ಉಪಾಧ್ಯಕ್ಷೆ ದೇವಮ್ಮ ಗಂಗಪ್ಪ, ಸದಸ್ಯರಾದ ರಾಮಣ್ಣ, ಮುಖ್ಯಾಧಿಕಾರಿ ಸಾಬಣ್ಣ ಕಟ್ಟಿಕಾರ್, ಪುರಸಭೆ ಸಿಬ್ಬಂದಿ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net