ಪ್ರತಿಯೊಂದು ಜೀವಿಗೂ ಬದುಕುವ ಹಕ್ಕಿದೆ : ನಿತ್ಯಾನಂದ ಶೆಟ್ಟಿ ಹೇಳಿಕೆ

3
Published on

ಬಂಟ್ವಾಳ: ನಿಸರ್ಗದಲ್ಲಿ ಇರುವ ಪ್ರತಿಜೀವಿಗೂ ಬದುಕುವ ಹಕ್ಕಿದೆ. ಆದರೆ ಮನುಷ್ಯ ತನ್ನ ಸ್ವಾರ್ಥಕ್ಕಾಗಿ ನಿಸರ್ಗದಲ್ಲಿ ಇರುವ ಇತರ ಜೀವಿಗಳನ್ನು ನಾಶ ಮಾಡುತ್ತಿದ್ದಾನೆ ಎಂದು ಗುಬ್ಬಚ್ಚಿ ಗೂಡು ಜಾಗೃತಿ ಅಭಿಯಾನ ರೂವಾರಿ ನಿತ್ಯಾನಂದ ಶೆಟ್ಟಿ ಹೇಳಿದರು.

ಶೇರಾ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಅಳಿವಿನಂಚಿನಲ್ಲಿರುವ ಪಕ್ಷಿ ಸಂಕುಲಗಳ ಉಳಿವಿಗಾಗಿ ಸಸ್ಯರಾಶಿಗಳ ಮಹತ್ವ ಜಾಗೃತಿ ಕಾರ್ಯಕ್ರಮದ ಅಂಗವಾಗಿ ಮಕ್ಕಳಿಗೆ ಪಕ್ಷಿಗಳ ಸಂರಕ್ಷಣೆ, ಅಗತ್ಯದ ಬಗ್ಗೆ ಮಾಹಿತಿ ಕಾರ್ಯಕ್ರಮದಲ್ಲಿ ಮಾತನಾಡಿದರು ಪಕ್ಷಿಗಳಿಗೆ ವಾಸಿಸಲು ನೈಸರ್ಗಿಕ ಗೂಡು ತಯಾರಿ, ನೀರು ಆಹಾರ ನೀಡುವ ವಿಧಾನಗಳ ಬಗ್ಗೆ ಪ್ರಾತ್ಯಕ್ಷಿಕೆ ಮೂಲಕ ವಿವರಿಸಿದರು.

ಶಾಲಾ ಅಭಿವೃದ್ಧಿ ಸಮಿತಿ ಅಧ್ಯಕ್ಷ ಚಂದ್ರಶೇಖರ, ಉಪಾಧ್ಯಕ್ಷೆ ಉಷಾ, ಹಿರಿಯ ಶಿಕ್ಷಕ ಗೋಪಾಲಗೌಡ, ಚಿನ್ನಾ ಕಲ್ಲಡ್ಕ, ಅಂಗನವಾಡಿ ಸಹಾಯಕಿ ಪುಷ್ಪಾ, ಶಾಲಾ ಮಕ್ಕಳು, ಅಂಗನವಾಡಿ ಪುಟಾಣಿಗಳು, ಶಿಕ್ಷಕರು, ಶಾಲಾಭಿವೃದ್ಧಿ ಸಮಿತಿ ಸದಸ್ಯರು, ಪಾಲಕರು, ಅಡುಗೆ ಸಿಬ್ಬಂದಿ ಮೊದಲಾದವರಿದ್ದರು. ಪ್ರಭಾರ ಮುಖ್ಯಶಿಕ್ಷಕಿ ಜಯಲಕ್ಷ್ಮೀ ಪಿ. ಸ್ವಾಗತಿಸಿದರು. ಶಿಕ್ಷಕಿ ಜೋಶ್ನಾ ಪ್ರಿಯ ವಾಸ್ ವಂದಿಸಿದರು. ಶಿಕ್ಷಕಿ ಅನಿತಾ ಕುಮಾರಿ ಕಾರ್ಯಕ್ರಮ ನಿರೂಪಿಸಿದರು. ಸುಮಲತಾ ಸಹಕರಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net