ಬದುಕಿಗೆ ಮಾರಕವಾದ ಪ್ಲಾಸ್ಟಿಕ್ ಬಳಕೆ ನಿರ್ಬಂಧ : ಹರೀಶ್ ಎಸ್.ಇಂಜಾಡಿ ಹೇಳಿಕೆ

New Project (2)
Published on

ವಿಜಯವಾಣಿ ಸುದ್ದಿಜಾಲ ಸುಬ್ರಹ್ಮಣ್ಯ

ಪ್ಲಾಸ್ಟಿಕ್ ನಿಷೇಧ ಮಾಡುವುದರಿಂದ ಪರಿಸರ ಸಂರಕ್ಷಣೆಯಾಗುತ್ತದೆ. ಸುಂದರ ಊರು, ಸ್ವಚ್ಛ ಕ್ಷೇತ್ರ ನಮ್ಮದಾಗಲಿದೆ. ಅಭಿಯಾನಕ್ಕೆ ಭಕ್ತರು, ಊರವರು, ಅಂಗಡಿಯವರು ಸಹಕಾರ ನೀಡಬೇಕು. ಬದುಕಿಗೆ ಮಾರಕವಾದ ಪ್ಲಾಸ್ಟಿಕನ್ನು ಸಂಪೂರ್ಣ ನಿರ್ಬಂಧಿಸುವುದು ನಮ್ಮ ಧ್ಯೇಯ ಎಂದು ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಹರೀಶ್ ಎಸ್.ಇಂಜಾಡಿ ಹೇಳಿದರು.

ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸಂಪೂರ್ಣ ಪ್ಲಾಸ್ಟಿಕ್ ನಿಷೇಧ ಮತ್ತು ನಮ್ಮ ನಡೆ ಪ್ಲಾಸ್ಟಿಕ್ ಮುಕ್ತದೆಡೆ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದರು.

ಜಾಗೃತಿ ಜಾಥಾ: ದೇವಳದ ರಾಜಗೋಪುರದ ಬಳಿ ಅಭಿಯಾನಕ್ಕೆ ಚಾಲನೆ ನೀಡಿ, ಕರಪತ್ರ ಬಿಡುಗಡೆಗೊಳಿಸಲಾಯಿತು. ದೇವಳದಿಂದ ಕಾಶಿಕಟ್ಟೆ ತನಕ ಹಾಗೂ ಕಾಶಿಕಟ್ಟೆಯಿಂದ ಬೈಪಾಸ್ ರಸ್ತೆ ಮೂಲಕ ದೇವಳದ ತನಕ ಜಾಗೃತಿ ಜಾಥಾ ನಡೆಯಿತು.

ದೇವಳದ ಕಾರ್ಯನಿರ್ವಹಣಾಧಿಕಾರಿ ಅರವಿಂದ ಅಯ್ಯಪ್ಪ ಸುತಗುಂಡಿ, ಸಹಾಯಕ ಕಾರ್ಯನಿರ್ವಹಣಾಧಿಕಾರಿ ಯೇಸುರಾಜ್ ಎಸ್.ಜೆ., ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಅಶೋಕ್ ನೆಕ್ರಾಜೆ, ಲೀಲಾ ಮನಮೋಹನ್, ಪ್ರವೀಣ ರೈ ಮರುವಂಜ, ಸೌಮ್ಯಾ ಭರತ್, ಮಾಸ್ಟರ್ ಪ್ಲಾನ್ ಸಮಿತಿ ಸದಸ್ಯರಾದ ಪವನ್ ಎಂ.ಡಿ., ಲೋಲಾಕ್ಷ ಕೈಕಂಬ, ಅಚ್ಚುತ ಆಲ್ಕಬೆ, ದೇವಳ ಸಿಬ್ಬಂದಿ ಉಪಸ್ಥಿತರಿದ್ದರು.

\

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net