ಕನ್ನಡಕ್ಕಾಗಿ ವಿಜಯಪುರದಲ್ಲಿ ಜಾಗೃತಿ ಜಾಥಾ

Awareness rally in Vijaypur for Kannada
ವಿಜಯಪುರದಲ್ಲಿ ನಡೆದ ಕನ್ನಡ ಜಾಗೃತಿ ಜಾಥಾ ವೇಳೆ ಕನ್ನಡ ನಾಮಫಲಕ ಅಳವಡಿಸುವಂತೆ ಅಂಗಡಿಗಳ ಮಾಲೀಕರಿಗೆ ಜಿಲ್ಲಾಧಿಕಾರಿ ಟಿ. ಭೂಬಾಲನ್​ ನೋಟಿಸ್​ ನೀಡಿದರು. ಮಹಾನಗರ ಪಾಲಿಕೆ ಆಯುಕ್ತ ವಿಜಯಕುಮಾರ ಮೆಕ್ಕಳಕಿ, ಫಯಾಜ್​ ಕಲಾದಗಿ ಮತ್ತಿತರರಿದ್ದಾರೆ.
Published on

ವಿಜಯಪುರ: ಜಿಲ್ಲೆಯಲ್ಲಿರುವ ವಿವಿಧ ಸರ್ಕಾರಿ ಹಾಗೂ ಖಾಸಗಿ ಕಚೇರಿ, ಶಾಲೆ, ಆಸ್ಪತ್ರೆ, ಅಂಗಡಿ ಮುಂಗಟ್ಟುಗಳಲ್ಲಿ ಕಡ್ಡಾಯವಾಗಿ ಕನ್ನಡ ನಾಮಫಲಕ ಅಳವಡಿಸುವ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಜಿಲ್ಲಾಧಿಕಾರಿ ಟಿ. ಭೂಬಾಲನ್​ ನೇತೃತ್ವದಲ್ಲಿ ವಿವಿಧ ಇಲಾಖೆ ಅಧಿಕಾರಿಗಳು, ಕನ್ನಡ ಪರ ಸಂಟನೆಗಳೊಂದಿಗೆ ಜಾಗೃತಿ ಜಾಥಾ ನಡೆಯಿತು.

ನಗರದ ಸೊಲ್ಲಾಪುರ ರಸ್ತೆಯ ಬಂಜಾರ ಕ್ರಾಸ್​ದಿಂದ ಭಾನುವಾರ ಬೆಳಗ್ಗೆ ಆರಂಭಗೊಂಡ ಜಾಥಾ ಶಿವಾಜಿ ವೃತ್ತದ ಮಾರ್ಗದ ಮೂಲಕ ಗಾಂಧಿ ವೃತ್ತದವರೆಗೂ ನಡೆಯಿತು.

ಸರ್ಕಾರದ ಆದೇಶದಂತೆ ಜಿಲ್ಲೆಯಲ್ಲಿ ಕಡ್ಡಾಯವಾಗಿ ಕನ್ನಡ ನಾಮಫಲಕ ಅಳವಡಿಸಲು ಕಟ್ಟುನಿಟ್ಟಿನ ಸೂಚನೆ ನೀಡಿದ ಜಿಲ್ಲಾಧಿಕಾರಿಗಳು, ನಾಮಫಲಕಗಳಲ್ಲಿ ಶೇ. 60 ರಷ್ಟು ಕನ್ನಡ ಭಾಷೆ ಮತ್ತು ಶೇ. 40 ರಷ್ಟು ಬೇರೆ ಭಾಷೆ ಬಳಸಲು ಅವಕಾಶವಿದೆ. ಅ. 30 ರೊಳಗೆ ಜಿಲ್ಲೆಯ ಎಲ್ಲ ನಾಮಫಲಕಗಳು ಕನ್ನಡ ಭಾಷೆ ಒಳಗೊಂಡಿರಬೇಕು.

ಅ. 31 ರ ನಂತರ ಕನ್ನಡ ಭಾಷೆ ಒಳಗೊಳ್ಳದ ನಾಮಫಲಕಗಳನ್ನು ಮುಟ್ಟುಗೊಲು ಹಾಕುವ ಜತೆಗೆ ಸಂಬಂಧಿಸಿದ ಅಂಗಡಿ&ಸಂಸ್ಥೆಗಳ ಮೇಲೆ ಯಾವುದೇ ಮುಲಾಜಿಲ್ಲದೆ ಕ್ರಮ ವಹಿಸಲಾಗುವುದು ಎಂದು ಅವರು ಹೇಳಿದರು.

ಕನ್ನಡ ನಾಮಫಲಕ ನಿಯಮಗಳ ಉಲ್ಲಂನೆಗೆ ಕೈಗಾರಿಕಾ, ಅಂಗಡಿ, ವಾಣಿಜ್ಯ ಸಂಸ್ಥೆಯ ಮಾಲೀಕರಿಗೆ ಮೊದಲನೇ ಅಪರಾಧಕ್ಕಾಗಿ 5ಸಾವಿರ ರೂ. ದಂಡ, ಎರಡನೇ ಅಪರಾಧಕ್ಕಾಗಿ ರೂ.10ಸಾವಿರ ರೂ.ವರೆಗೆ ವಿಸ್ತರಿಸಬಹುದಾದ ದಂಡ, ನಂತರ ಪ್ರತಿ ಅಪರಾಧಕ್ಕೆ 20 ಸಾವಿರ ರೂ. ದಂಡ ಮತ್ತು ಪರವಾನಗಿ ರದ್ದುಪಡಿಸಲಾಗುವುದು ಎಂದು ತಿಳಿಸಿದರು.

ದಾರಿಯುದ್ದಕ್ಕೂ ಕನ್ನಡ ನಾಮಫಲಕ ಅಳವಡಿಸದ ಅಂಗಡಿ ಮಾಲೀಕರಿಗೆ ನೋಟಿಸ್​ ನೀಡಿ ಅ. 31 ರೊಳಗೆ ಕನ್ನಡ ನಾಮಫಲಕ ಅಳವಡಿಸಬೇಕು ಎಂದು ಎಚ್ಚರಿಕೆ ನೀಡಲಾಯಿತು.

ಹೆಚ್ಚುವರಿ ಪೊಲೀಸ್​ ವರಿಷ್ಠಾಧಿಕಾರಿ ಶಂಕರ ಮಾರಿಹಾಳ, ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ, ಪಾಲಿಕೆ ಆಯುಕ್ತ ವಿಜಯಕುಮಾರ ಮೆಕ್ಕಳಕಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಸಂಪತ್​ ಗುಣಾರಿ, ವಿಡಿಎ ಆಯಕ್ತ ರಾಜಶೇಖರ ಡಂಬಳ, ಜಿಲ್ಲಾ ಶಸ ಚಿಕಿತ್ಸಕ ಡಾ. ಶಿವಾನಂದ ಮಾಸ್ತಿಹೋಳಿ, ಜಿಪಂ ಮುಖ್ಯ ಯೋಜನಾಧಿಕಾರಿ ನಿಂಗಪ್ಪ ಗೋಠೆ, ಪ್ರವಾಸೋಧ್ಯಮ ಇಲಾಖೆ ಉಪನಿರ್ದೇಶಕ ಮಲ್ಲಿಕಾರ್ಜುನ ಬಜಂತ್ರಿ, ಕೃಷಿ ಇಲಾಖೆಯ ಜಂಟಿ ನಿರ್ದೇಶಕಿ ರೂಪಾ. ಎಲ್​., ಪಾಲಿಕೆ ಉಪ ಆಯುಕ್ತ ಮಹಾವೀರ ಬೋರಣ್ಣವರ್​, ಸೈನಿಕ ಕಲ್ಯಾಣ ಇಲಾಖೆ ಉಪ ನಿರ್ದೇಶಕಿ ವಿನುತಾ, ಸಹಾಯಕ ಸಂಚಾರ ವ್ಯವಸ್ಥಾಪಕ ಜೆ.ಕೆ. ಹುಗ್ಗೆನ್ನವರ್​, ಕಕರಸಾ ನಿಗಮದ ವಿಭಾಗೀಯ ನಿಯಂತ್ರಣಾಧಿಕಾರಿ ನಾರಾಯಣಪ್ಪ ಕುರುಬರ, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಪುಂಡಲಿಕ್​ ಮಾನವರ, ಪಿಯುಸಿ ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಸಿ.ಕೆ. ಹೊಸಮನಿ, ಕನ್ನಡ ಮತ್ತು ಸಂಸತಿ ಇಲಾಖೆಯ ಸಹಾಯಕ ನಿರ್ದೇಶಕ ಸಂತೋಷ ಭೋವಿ, ಜಿಲ್ಲಾ ಮಟ್ಟದ ವಿವಿಧ ಇಲಾಖೆ ಅಧಿಕಾರಿಗಳು, ಕನ್ನಡಪರ ಸಂಟನೆಯ ಸದಸ್ಯರು ಮತ್ತಿತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net