ವಿದ್ಯಾರ್ಥಿಗಳಲ್ಲಿ ಅರಿವು ಹೆಚ್ಚಾಗಬೇಕು

P PURA JAGRUTHI 01 (2)
Published on

ಪರಶುರಾಮಪುರ: ಶಾಲಾ ಹಂತದ ವಿದ್ಯಾರ್ಥಿಗಳಿಗೆ ವೈಯಕ್ತಿಕ ಸ್ವಚ್ಛತೆ, ಸಾಂಕ್ರಾಮಿಕ ರೋಗಗಳ ಅರಿವು ಹಾಗೂ ಪರಿಸರ ಸಂರಕ್ಷಣೆ ಕುರಿತು ಅರಿವು ಹೆಚ್ಚು ಅರಿವು ಮೂಡಿಸುವುದು ಅಗತ್ಯ ಎಂದು ಮುಖ್ಯಶಿಕ್ಷಕಿ ಟಿ.ಕೆ.ಮಂಜುಳಾ ಹೇಳಿದರು.

ಶಾಲಾ ಶಿಕ್ಷಣ ಮತ್ತು ಅರಣ್ಯ ಇಲಾಖೆ, ಶಾಲಾ ಸಮಿತಿ. ಸಹಿಪ್ರಾ ಶಾಲಾ ವತಿಯಿಂದ ಚಿತ್ರದುರ್ಗ ತಾಲೂಕು ಜೆ.ಎನ್.ಕೋಟೆ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ಆಯೋಜಿಸಿದ್ದ ಸ್ವಚ್ಛತಾ ಕಾರ್ಯದಲ್ಲಿ ಮಾತನಾಡಿದರು.

ಶಾಲಾ ಆವರಣದಲ್ಲಿ ಸಸಿಗಳನ್ನು ನೆಡಲಾಯಿತು. ಬಳಿಕ ಗ್ರಾಮದಲ್ಲಿ ವಿದ್ಯಾರ್ಥಿಗಳು ಜಾಗೃತಿ ಜಾಥಾ ನಡೆಸಿದರು.

ಸಮೂಹ ಸಂಪನ್ಮೂಲ ವ್ಯಕ್ತಿ ವೆಂಕಟೇಶ ಪಾಪಣ್ಣ ರೆಡ್ಡಿ, ದೈಹಿಕ ಶಿಕ್ಷಣ ಶಿಕ್ಷಕ ಕೊಲ್ಲಪ್ಪ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net