

ಹೊನ್ನಾಳಿ: ನಾನು ಕಾಂಗ್ರೆಸ್ ಸೇರುತ್ತೇನೆಂದು ಎಲ್ಲೂ ಹೇಳಿಲ್ಲ. ಅರ್ಜಿಯನ್ನೂ ಹಾಕಿಲ್ಲ. ನಾನು ಬಿಜೆಪಿ ಬಿಡುವ ಪ್ರಶ್ನೆಯೇ ಇಲ್ಲ ಎಂದು ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ಹೇಳಿದರು.
ಕೇಂದ್ರ ಸರ್ಕಾರ ಉಜ್ವಲ ಯೋಜನೆಯಡಿ 400 ರೂ. ಸಬ್ಸಿಡಿ ಹಾಗೂ ಸಿಲಿಂಡರ್ ಬೆಲೆ 200 ರೂ. ಕಡಿಮೆ ಮಾಡಿರುವ ಬಗ್ಗೆ ಶುಕ್ರವಾರ ಜನರಿಗೆ ಜಾಗೃತಿ ಮೂಡಿಸಿ ಅವರು ಮಾತನಾಡಿದರು.
ಬಿಜೆಪಿ ಪಕ್ಷ ನನಗೆ ಎಲ್ಲವನ್ನೂ ಕೊಟ್ಟಿದ್ದು, ಪಕ್ಷ ನನಗೆ ತಾಯಿ ಇದ್ದಂತೆ. ಯಡಿಯೂರಪ್ಪ ನನಗೆ ನಾಯಕರು ಎಂದರು.
ಮಾಜಿ ಸಚಿವನಾಗಿ ಕ್ಷೇತ್ರದ ಅಭಿವೃದ್ಧಿಗಾಗಿ ಅಧಿಕಾರದಲ್ಲಿರುವ ಜನಪ್ರತಿನಿಧಿಗಳನ್ನು ಭೇಟಿಯಾಗಿದ್ದು ನಿಜ. ಆದರೆ, ಅದಕ್ಕೆ ಬೇರೆ ಅರ್ಥ ಕಲ್ಪಿಸುವುದು ಬೇಕಿಲ್ಲ ಎಂದರು.