ಪ್ಲಾಸ್ಟಿಕ್ ಬಳಕೆ ತಡೆಗೆ ಜಾಗೃತಿ

IMG-20240923-WA0252
Published on

ಗುಂಡ್ಲುಪೇಟೆ: ಬಂಡೀಪುರದ ಹುಲಿ ಸಂರಕ್ಷಿತ ಪ್ರದೇಶದ ಮದ್ದೂರು ವಲಯದಲ್ಲಿ ಸ್ವಚ್ಛತಾ ಆಂದೋಲನ ಹಾಗೂ ಪ್ಲಾಸ್ಟಿಕ್ ಬಳಕೆ ತಡೆಗಟ್ಟುವ ಬಗ್ಗೆ ಜಾಗೃತಿ ಕಾರ್ಯಕ್ರಮ ನಡೆಯಿತು.


ಮದ್ದೂರು ಕಾಲನಿಯ ಗಿರಿಜನ ವಿದ್ಯಾರ್ಥಿನಿಲಯದ ವಿದ್ಯಾರ್ಥಿಗಳ ಸಹಯೋಗದೊಂದಿಗೆ ಸಸಿ ನೆಡುವುದು, ರಸ್ತೆಗಳ ಬದಿಗಳಲ್ಲಿ ಬಿಸಾಡಿದ್ದ ಕಸ ಹಾಗೂ ಪ್ಲಾಸ್ಟಿಕ್ ತ್ಯಾಜ್ಯವನ್ನು ತೆರವು ಮಾಡಿದ ನಂತರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಪ್ಲಾಸ್ಟಿಕ್ ಬಳಕೆ ನಿಷೇಧ ಇರುವ ಬಗ್ಗೆ ಪ್ರವಾಸಿಗರಿಗೆ ಮನವರಿಕೆ ಮಾಡಲಾಯಿತು. ಮದ್ದೂರು ವಲಯ ಅರಣ್ಯಾಧಿಕಾರಿ ಪುನೀತ್, ಸಿಬ್ಬಂದಿ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net