

ಮಂಡ್ಯ: ಅಯೋಧ್ಯೆ ರಾಮಮಂದಿರದಲ್ಲಿ ಜ.22ರಂದು ಪ್ರಾಣ ಪ್ರತಿಷ್ಠಾಪನೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ಅನುಕೂಲವಾಗುವ ದೃಷ್ಟಿಯಿಂದ ಜಿಲ್ಲೆಯಲ್ಲಿ ಅಂದು ಸಾರ್ವತ್ರಿಕ ರಜೆ ಘೋಷಿಸುವಂತೆ ಒತ್ತಾಯಿಸಿ ಶ್ರೀರಾಮ ಭಕ್ತರು ಹಾಗೂ ಕರೆಸೇವಕರು ಜಿಲ್ಲಾಧಿಕಾರಿ ಡಾ.ಕುಮಾರ ಅವರಿಗೆ ಮನವಿ ಮಾಡಿದರು.
ಪ್ರಾಣ ಪ್ರತಿಷ್ಠಾಪನೆಯ ದಿನ ಜಗತ್ತಿನ ಹಿಂದುಗಳಿಗೆ ಪವಿತ್ರವಾದ ಧಾರ್ಮಿಕ ದಿನವಾಗಿದೆ. ಅಂದು ಜಿಲ್ಲೆಯ ಜನತೆ ದೂರದರ್ಶನದಲ್ಲಿ ನೇರ ಪ್ರಸಾರ ವೀಕ್ಷಣೆ ಮಾಡಲು ಅನುಕೂಲವಾಗುವಂತೆ ಸಾರ್ವತ್ರಿಕ ರಜೆ ಘೋಷಣೆ ಮಾಡಬೇಕು. ಅದೇ ರೀತಿ ಮಾಂಸ, ಮದ್ಯ ಮಾರಾಟ ನಿಷೇಧ ಮಾಡಬೇಕೆಂದು ಒತ್ತಾಯಿಸಿದರು.
ಎಸ್.ಶಿವಕುಮಾರ್ ಆರಾಧ್ಯ, ಸಿ.ಟಿ.ಮಂಜುನಾಥ್, ಮಹಾಂತೇಶ್, ಹೊಸಳ್ಳಿಶಿವು, ಪ್ರಸನ್ನಕುಮಾರ್, ಶಿವಮ್ಮ, ಎಂ.ಎಸ್.ಸುಧಾಮಣಿ, ಬಿ.ಟಿ ಶಿವಲಿಂಗಯ್ಯ, ನಿತ್ಯಾನಂದ ಇತರರಿದ್ದರು.