

ಬೆಳಗಾವಿ: ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ನಿರ್ಮಾಣಕ್ಕಾಗಿ ಹಮ್ಮಿಕೊಂಡಿರುವ ನಿಧಿ ಸಂಗ್ರಹ ಅಭಿಯಾನಕ್ಕೆ ದೇಶಾದ್ಯಂತ ಅಭೂತಪೂರ್ವ ಬೆಂಬಲ ವ್ಯಕ್ತವಾಗುತ್ತಿದೆ. ಗಣ್ಯರ ಹಾದಿಯಾಗಿ ಎಲ್ಲ ವರ್ಗದ ಜನರೂ ತಮ್ಮ ಅನುಕೂಲತೆಗೆ ತಕ್ಕಂತೆ ಧನ ಸಹಾಯ ಮಾಡುತ್ತಿದ್ದಾರೆ. ಈ ನಿಟ್ಟಿನಲ್ಲಿ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ಕೂಡ 2 ಲಕ್ಷ ರೂ. ಸಮರ್ಪಿಸಿದ್ದಾರೆ.
ಮಂಗಳವಾರ ನಿಧಿ ಸಂಗ್ರಹಕ್ಕೆ ಬಂದ ವಿಶ್ವಹಿಂದೂ ಪರಿಷತ್ ಪ್ರಮುಖರಿಗೆ ಲಕ್ಷ್ಮೀ ಹೆಬ್ಬಾಳ್ಕರ್ ಮತ್ತು ಅವರ ಸಹೋದರ ಚನ್ನರಾಜ ಹಟ್ಟಿಹೊಳಿ 2 ಲಕ್ಷ ರೂ. ಚೆಕ್ ಹಸ್ತಾಂತರಿಸಿದರು. ವಿದ್ಯಾಭಾರತಿ ಕರ್ನಾಟಕ ಪ್ರಾಂತ ಅಧ್ಯಕ್ಷ ಪರಮೇಶ್ವರ ಹೆಗಡೆ, ವಿಹಿಪ ಸಹಕೋಶಾಧ್ಯಕ್ಷ ಕೃಷ್ಣ ಭಟ್ ಮತ್ತಿತರರು ಇದ್ದರು. ಇದನ್ನೂ ಓದಿರಿ VIDEO| ಹಿಂಸಾಚಾರಕ್ಕೆ ತಿರುಗಿದ ‘ಟ್ರ್ಯಾಕ್ಟರ್ ಪರೇಡ್’, ತಲ್ವಾರ್ ಹಿಡಿದು ಬಂದ ರೈತರು!