ಮೂರ್ನಾಡುವಿನಲ್ಲಿ ಆಯುಧ ಪೂಜೆ ಸಂಭ್ರಮ

ayudha pooje
Published on

ಮಡಿಕೇರಿ:

ಸಮೀಪದ ಮೂರ್ನಾಡುವಿನಲ್ಲಿ ತ್ರಿನೇತ್ರ ವಾಹನ ಮಾಲೀಕರುÀ ಹಾಗೂ ಚಾಲಕರ ಸಂಘದ ವತಿಯಿಂದ ಅದ್ಧೂರಿ ಆಯುಧ ಪೂಜಾ ಕಾರ್ಯಕ್ರಮವು ಈಚೆಗೆ ವಿಜೃಂಭಣೆಯಿAದ ಜರುಗಿತು.

ಇಲ್ಲಿನ ಸರ್ಕಾರಿ ಪ್ರೌಢಶಾಲಾ ಮೈದಾನದಲ್ಲಿ ನಿರ್ಮಿಸಲಾದ ಅಲಂಕೃತ ವೇದಿಕೆಯಲ್ಲಿ 32ನೇ ವರ್ಷದ ಆಯುಧ ಪೂಜೆಯ ಕಾರ್ಯಕ್ರಮಗಳಲ್ಲಿ ಅಲಂಕೃತ ವಾಹನಗಳಿಗೆ ಸಾಮೂಹಿಕ ಪೂಜೆ ನೆರವೇರಿತು. ನಂತರ ಮುಖ್ಯ ರಸ್ತೆಯಲ್ಲಿ ಸಾಗಿದ ಮೆರವಣಿಗೆಯಲ್ಲಿ ವಿಶೇಷವಾಗಿ ಅಲಂಕೃತಗೊAಡ ವಾಹನಗಳಲ್ಲಿ ಏಳುಮಲೆ ಮುದ್ದು ಮಾದಪ್ಪ, ಬಡವರ ಗುಡಿಸಲು ಮನೆ, ಕೊಡಗಿನ ಕಾವೇರಿ ಮಾತೆ, ಪರಿಶುದ್ದ ಗಾಳಿಗೆ ಅಗ್ರಸ್ಥಾನ ಪಡೆದ ಮಡಿಕೇರಿ, ಶಬರಿಮಲೆ ಅಯ್ಯಪ್ಪ, ಈಸಲ ಕಪ್ ನಮ್ದೆ ಚಿನ್ನಸ್ವಾಮಿ ಕ್ರೀಡಾಂಗಣ, ವಿಷ್ಣುವಿನ ವರಾಹರೂಪಂ, ಜಸ್ಟೀಸ್ ಫಾರ್ ಸೌಜನ್ಯ, ದೇವಿ ಮಹಾತ್ಮೆ, ಪಿಲಿ ನಲಿಕೆ, ಭೂಲೋಕಕ್ಕೆ ಭೂದೇವಿಯ ಆಗಮನ, ಹೆಂಡತಿಯಿAದ ವಿಚ್ಛೇದನ ಪಡೆದ ಖುಷಿಗೆ 40 ಲೀಟರ್ ಹಾಲಿನಿಂದ ಸ್ನಾನ ಮಾಡಿದ ಭೂಪ ಹೀಗೆ ಇನ್ನು ಹಲವಾರು ಸ್ತಬ್ದ ಚಿತ್ರಗಳು, ಕಲಾಕೃತಿಗಳು ಮತ್ತು ಕ್ಯಾಲಿಕಟ್‌ನ ಶ್ರೀಹರಿ ಕಲಾ ಸಮಿತಿಯ ಗೊಂಬೆ ಕುಣಿತ ಮತ್ತು ಸುಳ್ಯದ ವಾದ್ಯಗೋಷ್ಠಿಗಳು ವೀಕ್ಷಕರ ಗಮನ ಸೆಳೆದವು.

ಇದಕ್ಕೂ ಮೊದಲು ನಡೆದ ಸಭಾಕಾರ್ಯಕ್ರಮದಲ್ಲಿ ಮಾತನಾಡಿದ ಮೂರ್ನಾಡು ಪ್ರೌಢಶಾಲೆಯ ಮುಖ್ಯ ಶಿಕ್ಷಕಿ ಎಸ್.ಎಂ. ದೇಚಮ್ಮ ಭಾರತ ಸನಾತನ ಸಂಸ್ಕೃತಿಯ ಅದ್ಧೂರಿಯ ಹಬ್ಬವೆಂದರೆ ದಸರಾ ಹಬ್ಬವಾಗಿದೆ. ಹಿಂದು ಸಂಸ್ಕೃತಿಯಲ್ಲಿ ಎರಡು ನವರಾತ್ರಿಗಳು ಬರುತ್ತದೆ. ಒಂದು ಶರವನ್ನಾವರಾತ್ರಿ ಮತ್ತು ವಸಂತ ನವರಾತ್ರಿ. ಆದರೆ ಶರವನ್ನಾವರಾತ್ರಿ ಹೆಚ್ಚು ಪ್ರಸಿದ್ದಿ ಪಡೆದುಕೊಂಡಿದೆ. ವಿಜಯದಶಮಿಯ 9ನೇ ದಿನದ ಆಯುಧಪೂಜೆಯ ಮಹತ್ವ ವರ್ಷದಿಂದ ವರ್ಷಕ್ಕೆ ಹೆಚ್ಚಾಗುತ್ತಿದೆ. ಸಮಾಜದಲ್ಲಿ ತಮ್ಮ ಜೀವನಕ್ಕೆ ಆಧಾರವಾದ ಪರಿಕರಗಳನ್ನು ಪೂಜಿಸಿ ಅದಕ್ಕೆ ಗೌರವವನ್ನು ನೀಡುವ ಮೂಲಕ ಎಲ್ಲರೂ ಆಯೂಧ ಪೂಜೆಯನ್ನು ನೆರವೇರಿಸುವುದು ಗಮನಾರ್ಹವಾಗಿದೆ ಎಂದರು.

ಕಾAತೂರು-ಮೂರ್ನಾಡು ಗ್ರಾಮ ಪಂಚಾಯಿತಿ ಅಧ್ಯಕ್ಷ ಬಿ.ಎಸ್. ಕುಶನ್ ರೈ, ವಿರಾಜಪೇಟೆಯ ಲಯನ್ಸ್ ಕ್ಲಬ್‌ನ ಅಧ್ಯಕ್ಷ ಮತ್ತು ವಕೀಲ ಬಿ.ಎ. ಕೃಷ್ಣಮೂರ್ತಿ, ಮೂರ್ನಾಡು ಮಾರುತಿ ವಿದ್ಯಾಸಂಸ್ಥೆಯ ಅಧ್ಯಕ್ಷ ಮುಂಡAಡ ಅಪ್ಪಚ್ಚು, ಮಡಿಕೇರಿ ಗ್ರಾಮಾಂತರ ಪೊಲೀಸ್ ವೃತ್ತ ನಿರೀಕ್ಷಕ ಹೆಚ್.ವಿ. ಚಂದ್ರಶೇಖರ್, ಮೂರ್ನಾಡು ಕಂದಾಯ ಇಲಾಖೆಯ ಗ್ರಾಮಾಡಳಿತಾಧಿಕಾರಿ ಅಕ್ಷತ ಬಿ. ಶೆಟ್ಟಿ, ಬೆಂಗಳೂರಿನ ಸಿಗ್ಮಾ ನೆಟ್‌ವರ್ಕ್ನ ಮಾಲೀಕ ಅವರೆಮಾದಂಡ ಶರಣ್ ಪೂಣಚ್ಚ ಮತ್ತು ಮೂರ್ನಾಡು ಪೊಲೀಸ್ ಉಪಠಾಣಾಧಿಕಾರಿ ಪಟ್ರಪಂಡ ಮೊಣ್ಣಪ್ಪ ಮಾತನಾಡಿದರು.

ಸಭೆಯ ಅಧ್ಯಕ್ಷತೆಯನ್ನು ತ್ರಿನೇತ್ರ ವಾಹನ ಮಾಲೀಕರ ಹಾಗೂ ಚಾಲಕರ ಸಂಘದ ಅಧ್ಯಕ್ಷ ಕರವಂಡ ಕೆ. ಸಜನ್ ಗಣಪತಿ ವಹಿಸಿದ್ದರು. ವೇದಿಕೆಯಲ್ಲಿ ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ಬಿ.ಎಸ್. ರೇಖಾ ಬಾಲು, ಸಂಘದ ಗೌರವಾಧ್ಯಕ್ಷ ಎನ್.ಕೆ. ಕುಂಞÂರಾಮ, ಹಿಂದೂ ಮಲಯಾಳಿ ಸಂಘದ ಅಧ್ಯಕ್ಷ ಕೆ. ಬಾಬು, ಮೂರ್ನಾಡು ಜ್ಞಾನಜ್ಯೋತಿ ವಿದ್ಯಾಸಂಸ್ಥೆಯ ಅಧ್ಯಕ್ಷ ಮುಕ್ಕಾಟಿರ ರವಿ ಚೀಯಣ್ಣ, ಮೂರ್ನಾಡು ಪಿಎಂಶ್ರೀ ಸರ್ಕಾರಿ ಮಾದರಿ ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕಿ ಬಿ.ಎಸ್. ಪುಷ್ಪಾವತಿ, ಮೂರ್ನಾಡು ಮುಸ್ಲಿಂ ಜಮಾಅತ್‌ನ ಅಧ್ಯಕ್ಷ ಕೆ.ಎ. ಅಬ್ದುಲ್ ಮಜೀದ್, ಸಂಘದ ಉಪಾಧ್ಯಕ್ಷ ಅಶ್ವಥ್ ರೈ, ಕಾರ್ಯದರ್ಶಿ ಎನ್.ಎನ್. ಶರಣು, ಖಜಾಂಚಿ ಹೆಚ್.ಹೆಚ್. ಜಯಂತ್ ಕುಮಾರ್, ಸಹ ಕಾರ್ಯದರ್ಶಿ ದಿನೇಶ್ ರೈ ವೇದಿಕೆಯಲ್ಲಿ ಇದ್ದರು.

ಸಭಾ ಕಾರ್ಯಕ್ರಮದಲ್ಲಿ ಕಾಂತೂರು-ಮೂರ್ನಾಡು ಗ್ರಾಮ ಪಂಚಾಯಿತಿಯ ಸಂಜೀವಿನಿ ಘನ ತ್ಯಾಜ್ಯ ವಿಂಗಡಣಾ ಘಟಕದ ಮಹಿಳಾ ಸಿಬ್ಬಂದಿ ಮತ್ತು ಕಳೆದ ಸಾಲಿನಲ್ಲಿ 10ನೇ ತರಗತಿಯಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಸಂಘದ ವತಿಯಿಂದ ಸನ್ಮಾನಿಸಲಾಯಿತು. ಅಲಂಕೃತಗೊAಡ ಮೋಟಾರು ರಹಿತ ದ್ವಿಚಕ್ರ(ಸೈಕಲ್), ದ್ವಿಚಕ್ರ, ತ್ರಿಚಕ್ರ, ನಾಲ್ಕು ಚಕ್ರ, ಆರು ಚಕ್ರ ವಾಹನಗಳು ಮತ್ತು ಅಂಗಡಿಗಳಿಗೆ ಪ್ರಥಮ, ದ್ವಿತೀಯ ಮತ್ತು ತೃತೀಯ ನಗದು ಬಹುಮಾನ ಹಾಗೂ ಪಾರಿತೋಷಕಗಳನ್ನು ಮುಖ್ಯ ಅತಿಥಿಗಳು ವಿತರಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net