

ಗಂಗೊಳ್ಳಿ: ಉಡುಪಿ ಜಿಲ್ಲಾಡಳಿತ, ಜಿಪಂ, ಆಯುಷ್ ಇಲಾಖೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ತಾಲೂಕು ಆರೋಗ್ಯ ಅಧಿಕಾರಿಗಳ ಕಚೇರಿ ಕುಂದಾಪುರ, ತಾಲೂಕು ಸರ್ಕಾರಿ ಆಯುಷ್ ಆಸ್ಪತ್ರೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಆಶ್ರಯದಲ್ಲಿ ಯೋಗೋತ್ಸವ ಕುಂದಾಪುರದಲ್ಲಿ ಗುರುವಾರ ನಡೆಯಿತು.
ತಾಲೂಕು ಆರೋಗ್ಯಾಧಿಕಾರಿ ಡಾ.ಪ್ರೇಮಾನಂದ ಕಾರ್ಯಕ್ರಮ ಉದ್ಘಾಟಿಸಿದರು. ಆಯುರ್ವೇದ ಆಹಾರ ಪದ್ಧತಿ ಬಗ್ಗೆ ಮಾಹಿತಿ ಒಳಗೊಂಡ ಕರಪತ್ರಗಳನ್ನು ಲಯನ್ಸ್ ಕ್ಲಬ್ ಕುಂದಾಪುರ ಅಮೃತಧಾರಾ ಅಧ್ಯಕ್ಷೆ ಆಶಾ ಶಿವರಾಮ್ ಶೆಟ್ಟಿ ಬಿಡುಗಡೆಗೊಳಿಸಿದರು. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಹಾಯಕ ಯೋಜನಾಧಿಕಾರಿ ದೀಪಾ ಉಪಸ್ಥಿತರಿದ್ದರು. ಮಹಿಳೆಯರಿಗೆ ಯೋಗ ಶಿಕ್ಷಣದ ಬಗ್ಗೆ ಅರಿವು, ಆಯುರ್ವೇದ ಆಹಾರ ಕ್ರಮಗಳ ಬಗ್ಗೆ ತಾಲೂಕು ಸರ್ಕಾರಿ ಆಯುಷ್ ಆಸ್ಪತ್ರೆ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ವಿಭಾಗದ ವೈದ್ಯೆ ಡಾ.ಶಿಲ್ಪಾ ಕೆ. ಮಾಹಿತಿ ನೀಡಿದರು. ಅಂಗನವಾಡಿ ಹಾಗೂ ಆಶಾ ಕಾರ್ಯಕರ್ತೆಯರು ಉಪಸ್ಥಿತರಿದ್ದರು. ಕ್ಷೇತ್ರ ಆರೋಗ್ಯ ಶಿಕ್ಷಣಧಿಕಾರಿ ಭಾಗ್ಯಲಕ್ಷ್ಮೀ ಕಾರ್ಯಕ್ರಮ ನಿರೂಪಿಸಿದರು.