ಕರ್ತವ್ಯಕ್ಕೆ ಅಡ್ಡಿ ಮಾಡಿದವರ ವಿರುದ್ಧ ಕ್ರಮಕ್ಕೆ ಆರೋಗ್ಯ ಸಚಿವರ ಸೂಚನೆ

Dinesh Gundurao
Published on

ಬೆಂಗಳೂರು: ಆಯುಷ್ ಇಲಾಖೆಯ ಅಧಿಕಾರಿಗಳ ವಿರುದ್ಧ ಮೂವರು ಪದೇ ಪದೇ ದೂರು ನೀಡುತ್ತಿದ್ದಾರೆ. ಇದರ ಹಿಂದೆ ಸ್ವಹಿತಾಸಕ್ತಿ ಇದ್ದರೆ ದೂರು ನೀಡಿದವರ ವಿರುದ್ಧವೇ ಕ್ರಮ ಕೈಗೊಳ್ಳಿ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ವಾಸುದೇವ ಹೊಳ್ಳ, ಜೆ.ಎಸ್.ಡಿ.ಪಾಣಿ ಮತ್ತು ಕಿರಣ್ ಪೂಜಾರಿ ಎಂಬುವವರು ಆಯುಷ್ ಇಲಾಖೆಯ ಕೆಲವು ಅಧಿಕಾರಿಗಳ ವಿರುದ್ಧ ಮತ್ತು ಇಲಾಖೆಯ ಕಾರ್ಯನಿರ್ವಹಣೆಯ ಕುರಿತು ಅರೋಪ ಮಾಡಿ ಆರೋಗ್ಯ ಸಚಿವಾಲಯಕ್ಕೆ, ಮುಖ್ಯಮಂತ್ರಿ ಸಚಿವಾಲಯಕ್ಕೆ, ಮುಖ್ಯ ಕಾರ್ಯದರ್ಶಿಯವರಿಗೆ ನಿರಂತರ ದೂರು ನೀಡುತ್ತಿದ್ದಾರೆ. ಈ ದೂರುಗಳ ಬಗ್ಗೆ ತನಿಖೆ ನಡೆಸಿ ಸತ್ಯಾಂಶ ಕಂಡು ಬಂದಲ್ಲಿ ಅಧಿಕಾರಿಗಳ ಮೇಲೆ ಶಿಸ್ತು ಕ್ರಮ ಪ್ರಸ್ತಾವ ಸಲ್ಲಿಸುವಂತೆ ಸೂಚಿಸಿದ್ದೆ. ಆದರೆ, ಕರ್ತವ್ಯಕ್ಕೆ ಅಡಚಣೆ ಉಂಟು ಮಾಡಲು ಹಾಗೂ ಸ್ವಹಿತಾಸಕ್ತಿ ರಕ್ಷಣೆಗಾಗಿ ದೂರು ನೀಡುತ್ತಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಹಾಗಾಗಿ ಈ ಕುರಿತು ಸೂಕ್ತ ತನಿಖೆ ನಡೆಸಿ ತಪ್ಪಿತಸ್ತರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುವಂತೆ ಸಚಿವರು ಆರೋಗ್ಯ ಇಲಾಖೆ ಪ್ರಧಾನ ಕಾರ್ಯದರ್ಶಿಯವರಿಗೆ ಸೋಮವಾರ ಹೊರಡಿಸಿರುವ ಟಿಪ್ಪಣ್ಣಿಯಲ್ಲಿ ನಿರ್ದೇಶನ ನೀಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net