

ಬೇಲೂರು: ರೋಗ ನಿರೋಧಕ ಶಕ್ತಿ ಹೆಚ್ಚಿಸುವ ಉದ್ದೇಶದಿಂದ ಆರೋಗ್ಯ ಇಲಾಖೆ ಸಿಬ್ಬಂದಿ ಹಾಗೂ ಆಶಾ ಕಾರ್ಯಕರ್ತೆಯರಿಗೆ ಆಯುಷ್ ಇಲಾಖೆಯಿಂದ ಆಯುಷ್ ಔಷಧ ಹಾಗೂ ಮಾತ್ರೆ ವಿತರಿಸಲಾಗುತ್ತಿದೆ ಎಂದು ಆಯುಷ್ ವೈದ್ಯಾಧಿಕಾರಿ ಡಾ.ಹಬೀಬುಲ್ಲ ಹೇಳಿದರು.
ತಾಲೂಕಿನ ಮಾದಿಹಳ್ಳಿ ಹೋಬಳಿಯ ಹಗರೆ ಸಮುದಾಯ ಆರೋಗ್ಯ ಕೇಂದ್ರದ ಸಿಬ್ಬಂದಿ ಹಾಗೂ ಆಶಾ ಕಾರ್ಯಕರ್ತೆಯರಿಗೆ ಗುರುವಾರ ಆಯುಷ್ ಔಷಧ ಹಾಗೂ ಮಾತ್ರೆ ವಿತರಿಸಿ ಮಾತನಾಡಿದ ಅವರು, ಸರ್ಕಾರದ ಆದೇಶದಂತೆ ಆಯುಷ್ ಇಲಾಖೆಯಿಂದ ಮಾತ್ರೆ ವಿತರಿಸಲಾಗುತಿದ್ದು, ಕರೊನಾ ವಾರಿಯರ್ಸ್‌ಗಳು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದರು.
ಹಗರೆ ಸಮುದಾಯ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಶಾಲಿನಿ ಮಾತನಾಡಿ, ಸೋಂಕು ತಡೆಗಟ್ಟುವಲ್ಲಿ ಆರೋಗ್ಯ ಇಲಾಖೆ ಸಿಬ್ಬಂದಿ ಹಾಗೂ ಆಶಾ ಕಾರ್ಯಕರ್ತೆಯರ ಶ್ರಮ ಹೆಚ್ಚಿದೆ ಎಂದರು. ಆರೋಗ್ಯ ಕೆಂದ್ರದ ಸಿಬ್ಬಂದಿ ಹಾಗೂ ಆಶಾ ಕಾರ್ಯಕರ್ತೆಯರು ಇದ್ದರು.