10 ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಕೇಂದ್ರಗಳ ಆರಂಭಕ್ಕೆ ಅನುಮತಿ

Ayush
Published on

ಬೆಂಗಳೂರು: ರಾಷ್ಟ್ರೀಯ ಆಯುಷ್ ಅಭಿಯಾನ ಯೋಜನೆಯಡಿ ರಾಜ್ಯದಲ್ಲಿ 10 ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಕೇಂದ್ರಗಳನ್ನು ತೆರೆಯಲು ಅನುಮತಿ ನೀಡಿರುವ ರಾಜ್ಯ ಸರ್ಕಾರ ಇದಕ್ಕಾಗಿ ಯಾವುದೇ ಹೆಚ್ಚುವರಿ ಅನುದಾನ ಕೋರದಂತೆ ಷರತ್ತುಬದ್ಧ ಆದೇಶ ಹೊರಡಿಸಿದೆ.

ಬೆಳಗಾವಿಯ ನಿಪ್ಪಾಣಿ ಮತ್ತು ಬೈಲಹೊಂಗಲ, ಬಾಗಲಕೋಟೆಯ ಬಾದಾಮಿ ಮತ್ತು ಮುಧೋಳ, ಗದಗ ಜಿಲ್ಲೆಯ ಗಜೇಂದ್ರಗಡ, ಕೊಪ್ಪಳದ ಕೂಕನೂರು, ಹಾವೇರಿಯ ರಾಣೆಬೆನ್ನೂರು, ವಿಜಯಪುರದ ಬಸವನ ಬಾಗೇವಾಡಿ, ಬೆಂಗಳೂರು ಗ್ರಾಮಾಂತರದ ದೇವನಹಳ್ಳಿ ಹಾಗೂ ಮೈಸೂರಿನ ಎಚ್.ಡಿ. ಕೋಟೆಯಲ್ಲಿ ಚಿಕಿತ್ಸಾ ಕೇಂದ್ರಗಳನ್ನು ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ (ಪಿಪಿಪಿ) ತೆರೆಯಲು ಅನುಮತಿ ನೀಡಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net