

ಟಿ. ರಾಮಚಂದ್ರ, ಕೊಂಡ್ಲಹಳ್ಳಿ: ಮೊಳಕಾಲ್ಮೂರು ತಾಲೂಕಿನಲ್ಲಿ ಆಯುಷ್ಮಾನ್ ಭಾರತ್- ಪ್ರಧಾನ ಮಂತ್ರಿ ಜನಾರೋಗ್ಯ ಯೋಜನೆ, ಆರೋಗ್ಯ ಕರ್ನಾಟಕ ಕಾರ್ಡ್ ನೋಂದಣಿ ಪ್ರಕ್ರಿಯೆ ಚುರುಕುಗೊಂಡಿದ್ದು, ನಿಗದಿತ ಗುರಿ ಸಾಧನೆಯತ್ತ ಸಾಗಿದೆ.
ಆಭಾ ಕಾರ್ಡ್ ಎಂದು ಕರೆಯುವ ಆಯುಷ್ಮಾನ್ ಕಾರ್ಡುಗಳ ಮಾಹಿತಿ, ಕಾರ್ಡಿನ ಅಗತ್ಯಗಳನ್ನು ಸಾರ್ವಜನಿಕರು, ಪ್ರತಿ ಮನೆಗೂ ತಲುಪಿಸುವ ಕಾರ್ಯ ನಿತ್ಯವೂ ನಡೆಯುತ್ತಿದೆ. ಶಾಲೆಗಳಿಗೂ ಭೇಟಿ ನೀಡಿ ವಿದ್ಯಾರ್ಥಿಗಳನ್ನೂ ನೋಂದಾಯಿಸಲಾಗುತ್ತಿದೆ. ಸಾಮಾನ್ಯ ಸೇವಾ ಕೇಂದ್ರ, ಗ್ರಾಮಒನ್, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಗಳ ಮೂಲಕ ಈ ಕಾರ್ಡ್‌ಗಳನ್ನು ನೋಂದಾಯಿಸಿ, ಒದಗಿಸುವ ಕಾರ್ಯ ಸೆಪ್ಟೆಂಬರ್‌ನಿಂದ ನಿರಂತರವಾಗಿದೆ.
ದೇಶದ ಯಾವುದೇ ನೋಂದಾಯಿತ ಆಸ್ಪತ್ರೆಯಲ್ಲಿ ಕಾರ್ಡ್ ಪಡೆದವರು, ಕುಟುಂಬ ಸದಸ್ಯರಿಗೆ ಒಂದು ವರ್ಷಕ್ಕೆ ಗರಿಷ್ಠ 5 ಲಕ್ಷ ರೂ. ವರೆಗಿನ ಉಚಿತ ಚಿಕಿತ್ಸೆಗೆ ನೆರವಾಗುತ್ತದೆ. ಯಾವುದೇ ಶುಲ್ಕ ನೀಡುವಂತಿಲ್ಲ. ನೋಂದಾಯಿತರಿಗೆ 14 ಅಂಕಿಗಳ ವಿಶಿಷ್ಟ ಆರೋಗ್ಯ ಗುರುತಿನ ಸಂಖ್ಯೆ ನೀಡಲಾಗುತ್ತದೆ. ಡಾ.ಬಿ.ಮಧುಕುಮಾರ್, ತಾಲೂಕು ಆರೋಗ್ಯಧಿಕಾರಿ, ಮೊಳಕಾಲ್ಮೂರು.