ಆರ್ಯವೈಶ್ಯರ ಸೇವಾ ಕಾರ್ಯಕ್ಕೆ ಮೆಚ್ಚುಗೆ

04
ಹೊಳೆನರಸೀಪುರ ಕನ್ನಿಕಾಪರಮೇಶ್ವರಿ ದೇವಾಲಯದಲ್ಲಿ ಶುಕ್ರವಾರ ಆಯೋಜಿಸಿದ್ದ ಆಯುಷ್ಮಾನ್ ಭಾರತ್ ಕಾರ್ಡ್ ವಿತರಣಾ ಕಾರ್ಯಕ್ರಮಕ್ಕೆ ಆಗಮಿಸಿದ್ದ ಸಂಸದ ಶ್ರೇಯಸ್ ಪಟೇಲ್ ಅವರನ್ನು ಆರ್ಯವೈಶ್ಯ ಸಮಾಜದ ಅಧ್ಯಕ್ಷ ಎ.ಆರ್.ರವಿಕುಮಾರ್ ಸನ್ಮಾನಿಸಿದರು. ಕೆ.ಶ್ರೀಧರ್, ಎಚ್.ಪಿ.ರಮೇಶ್, ಮಂಜುನಾಥ್, ಮುರಳಿಧರ ಗುಪ್ತಾ, ಮಂಜುನಾಥ್ ಗುಪ್ತಾ ಭಾಗವಹಿಸಿದ್ದರು.
Published on

ಹೊಳೆನರಸೀಪುರ: ಆರ್ಯವೈಶ್ಯ ಸಮಾಜದವರು ಒಂದಲ್ಲೊಂದು ಸಮಾಜ ಸೇವಾ ಕಾರ್ಯದಲ್ಲಿ ತೊಡಗಿಸಿಕೊಂಡಿರುತ್ತಾರೆ ಎಂದು ಸಂಸದ ಶ್ರೇಯಸ್ ಪಟೇಲ್ ಎಂದು ಪ್ರಶಂಶಿಸಿದರು.

ಕನ್ನಿಕಾಪರಮೇಶ್ವರಿ ದೇವಾಲಯದಲ್ಲಿ ಶುಕ್ರವಾರ ಆಯೋಜಿಸಿದ್ದ ಆಯುಷ್ಮಾನ್ ಭಾರತ್ ಕಾರ್ಡ್ ವಿತರಣಾ ಕಾರ್ಯಕ್ರಮದಲ್ಲಿ ಹಿರಿಯ ನಾಗರಿಕರಿಗೆ ಆಯುಷ್ಮಾನ್ ಭಾರತ್ ಕಾರ್ಡ್ ವಿತರಿಸಿ ಮಾತನಾಡಿದ ಅವರು, ನಿಮ್ಮೆಲ್ಲರ ಆಶೀರ್ವಾದದಿಂದ ಸಂಸದನಾಗಿ ಆಯ್ಕೆಯಾಗಿದ್ದೇನೆ. ನನ್ನ ಮೇಲೆ ನಂಬಿಕೆ ಇಟ್ಟು ಗೆಲ್ಲಿಸಿದ ನಿಮ್ಮ ಜತೆ ಸದಾ ಇರಲಿದ್ದೇನೆ. ನಿಮ್ಮ ವಾರ್ಡ್‌ನಲ್ಲಿ ಏನಾದರು ಸಮಸ್ಯೆ ಇದ್ದರೆ ನನ್ನ ಗಮನಕ್ಕೆ ತಂದರೆ ಪರಿಹರಿಸುತ್ತೇನೆ ಎಂದು ಭರವಸೆ ನೀಡಿದರು.

ವಾಸವಿ ವಿದ್ಯಾಸಂಸ್ಥೆಯ ಕಾರ್ಯದರ್ಶಿ ಬಾಲಾಜಿ ಮಾತನಾಡಿದರು. ಆರ್ಯವೈಶ್ಯ ಸಮಾಜದ ಅಧ್ಯಕ್ಷ ಎ.ಆರ್.ರವಿಕುಮಾರ್, ಕಾರ್ಯದರ್ಶಿ ಎಚ್.ಪಿ.ರಮೇಶ್, ಉಪಾಧ್ಯಕ್ಷ ಮಂಜುನಾಥ್, ಮುರಳಿಧರ ಗುಪ್ತಾ, ಎಸ್.ಎಸ್.ಮಂಜುನಾಥ್ ಗುಪ್ತಾ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net