ಶನಿವಾರಸಂತೆಯಲ್ಲಿ ಆಯುಷ್ಮಾನುಭವ ಬೃಹತ್ ಆರೋಗ್ಯ ತಪಾಸಣಾ ಶಿಬಿರ

Ayushmanubhav Big Health Checkup Camp on Saturday
Published on

ಮಡಿಕೇರಿ:

ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ, ಬೋಧಕ ಆಸ್ಪತ್ರೆ ವತಿಯಿಂದ ಸೋಮವಾರಪೇಟೆ ತಾಲ್ಲೂಕು ಶನಿವಾರಸಂತೆ ಗ್ರಾಮದಲ್ಲಿ ಜಿಲ್ಲಾ ಮಟ್ಟದ ಆಯುμÁ್ಮನ್ ಭವ ಕಾರ್ಯಕ್ರಮದ ಬೃಹತ್ ಆರೋಗ್ಯ ತಪಾಸಣಾ ಶಿಬಿರ ನಡೆಯಿತು.

ಕೊಡಗು ವ್ಯೆದ್ಯಕೀಯ ವಿಜ್ಞಾನಗಳ ಸಂಸ್ಥೆ, ಬೋಧಕ ಆಸ್ಪತ್ರೆ ಮಡಿಕೇರಿ. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಶನಿವಾರ ಸಂತೆ ಸಮುದಾಯ ಆರೋಗ್ಯ ಕೇಂದ್ರ, ಗ್ರಾಮ ಪಂಚಾಯ್ತಿ ಇವರ ಸಂಯುಕ್ತ ಆಶ್ರಯದಲ್ಲಿ ಶನಿವಾರಸಂತೆ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ನಡೆಯಿತು.

ಶಿಬಿರದಲ್ಲಿ ಸಾಮಾನ್ಯ ವೈದಶಾಸ್ತ್ರ, ಶಸ್ತ್ರ ಚಿಕಿತ್ಸೆ, ಕಣ್ಣು, ಪ್ರಸೂತಿ ಮತ್ತು ಸ್ತ್ರೀ ರೋಗ, ಮಕ್ಕಳ, ಚರ್ಮ ರೋಗ, ಕಿವಿ ಮೂಗು, ಗಂಟಲು, ಮೂಳೆ ಮತ್ತು ಕೀಲು, ಸಮುದಾಯ ವ್ಯೆದ್ಯಕೀಯ, ದಂತ, ಮಾನಸಿಕ ರೋಗ, ಆಸಾಂಕ್ರಾಮಿಕ ರೋಗಗಳ ನುರಿತ ತಜ್ಞ ವ್ಯೆದ್ಯರು ವೈದ್ಯಕೀಯ ಸೇವೆ ನೀಡಿದರು, ಸುಮಾರು 500 ಕ್ಕೂ ಹೆಚ್ಚು ಹೊರ ರೋಗಿಗಳ ಭೇಟಿ ನೀಡಿದ್ದರು. 21 ಯುಡಿಐಡಿ ಕಾರ್ಡ್‍ಗಳು, 54 ಜನರು ಆರೋಗ್ಯ ಕಾರ್ಡ್‍ಗಳನ್ನು ಶಿಬಿರದಲ್ಲಿ ಸಾರ್ವಜನಿಕರಿಗೆ ಪ್ರಯೋಜನ ಕಲ್ಪಿಸಿಕೊಡಲಾಯಿತು.

ಶಿಬಿರಕ್ಕೆ ಭೇಟಿ ನೀಡಿದ ಶಾಸಕರಾದ ಡಾ.ಮಂಥರ್ ಗೌಡ ಅವರು ಶಿಬಿರದ ಆಯೋಜನೆ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದರು.
ಈ ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿದ ಶನಿವಾರಸಂತೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಗೀತಾ ಹರೀಶ್ ಅವರು ಮಾತನಾಡಿ, ಬೃಹತ್ ಆರೋಗ್ಯ ಶಿಬಿರವನ್ನು ಪ್ರತಿ ತಿಂಗಳು ಆಯೋಜನೆ ಮಾಡುವುದರಿಂದ ದೂರದ ಹಾಸನ, ಮಂಗಳೂರು, ಮೈಸೂರು ಆಸ್ಪತ್ರೆಗಳಿಗೆ ಚಿಕಿತ್ಸೆಗೆ ಹೋಗುವುದು ತಪ್ಪುತ್ತದೆ ಎಂದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಕೆ.ಎಂ.ಸತೀಶ್ ಕುಮಾರ್ ಅವರು ಮಾತನಾಡಿ ರಾಷ್ಟ್ರಪತಿಗಳು ಆಯುμÁ್ಮನ್ ಭವ ಕಾರ್ಯಕ್ರಮಕ್ಕೆ ಚಾಲನೆ ನೀಡಿದ್ದು, ಸೆಪ್ಟೆಂಬರ್ ನಿಂದ ಡಿಸೆಂಬರ್ ತಿಂಗಳವರೆಗೂ ಕೊಡಗು ವ್ಯೆದ್ಯಕೀಯ ಕಾಲೇಜಿನೊಂದಿಗೆ ಜಿಲ್ಲೆಯ ವಿವಿಧ ಕಡೆ ಆರೋಗ್ಯ ಕಾರ್ಯಕ್ರಮಗಳು ಹಾಗೂ ಶಿಬಿರಗಳನ್ನು ಆಯೋಜನೆ ಮಾಡಿ ಎಲ್ಲರಿಗೂ ಉತ್ತಮ ಆರೋಗ್ಯ ಸೇವೆಯನ್ನು ಒದಗಿಸಲಾಗುತ್ತದೆ ಎಂದು ತಿಳಿಸಿದರು.

ಜಿಲ್ಲಾ ಶಸ್ತ್ರ ಚಿಕಿತ್ಸಕರಾದ ಡಾ.ನಂಜುಂಡಯ್ಯ, ಅವರು ಮಾತನಾಡಿ ಆಯುμÁ್ಮನ್ ಭವ ಆರೋಗ್ಯ ಕಾರ್ಯಕ್ರಮದ ಕುರಿತು ಹಾಗೂ ಕಾರ್ಯಕ್ರಮದಲ್ಲಿ ನೀಡುವ ಸೇವೆಗಳ ಬಗ್ಗೆ ಸಂಪೂರ್ಣ ಮಾಹಿತಿ ನೀಡಿದರು.
ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ಸ್ಥಾನೀಯ ವ್ಯೆದ್ಯಾಧಿಕಾರಿ ಡಾ.ಸತೀಶ್ ವಿ.ಎಸ್ ಅವರು ಮಾತನಾಡಿ ಕೊಡಗು ವ್ಯೆದ್ಯಕೀಯ ಕಾಲೇಜಿನಲ್ಲಿ ಸಿಗುವ ಸೌಲಭ್ಯಗಳ ಕುರಿತು ಮಾಹಿತಿ ನೀಡಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net