ಮಡಿಕೇರಿಯಲ್ಲಿ ’ಆಯುಷ್ಮತಿ ಕ್ಲಿನಿಕ್’ಗೆ ಚಾಲನೆ

27mdk11
Published on

ಮಡಿಕೇರಿ:
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ರಾಷ್ಟ್ರೀಯ ಆರೋಗ್ಯ ಅಭಿಯಾನ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ’ಆಯುಷ್ಮತಿ ಕ್ಲಿನಿಕ್’ಗೆ ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಮತ್ತು ನಗರಸಭೆ ಅಧ್ಯಕ್ಷೆ ಅನಿತಾ ಪೂವಯ್ಯ ಸೋಮವಾರ ಚಾಲನೆ ನೀಡಿದರು.

ನಗರದ ಮಹದೇವ ಪೇಟೆಯಲ್ಲಿರುವ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ನಡೆದ ಕಾರ್ಯಕ್ರಮದಲ್ಲಿ ನಂತರ ಮಾತನಾಡಿದ ನಗರಸಭೆ ಅಧ್ಯಕ್ಷರಾದ ಅನಿತಾ ಪೂವಯ್ಯ ಸ್ವಸ್ಥ ಸಮಾಜ ನಿರ್ಮಿಸುವಲ್ಲಿ ’ಆಯುಷ್ಮತಿ ಕ್ಲಿನಿಕ್’ ಸಹಕಾರಿಯಾಗಿದೆ. ಮಹಿಳೆಯರು ಆರೋಗ್ಯಕ್ಕೆ ಸಂಬಂಧಿಸಿದಂತೆ ವೈದ್ಯರ ಜೊತೆ ಮುಕ್ತವಾಗಿ ಅಭಿಪ್ರಾಯ ಹಂಚಿಕೊಳ್ಳಲು ’ಆಯುಷ್ಮತಿ ಕ್ಲಿನಿಕ್’ ಅನುಕೂಲವಾಗಿದೆ ಎಂದರು.

ಆರ್‌ಸಿಎಚ್ ಅಧಿಕಾರಿ ಡಾ.ಗೋಪಿನಾಥ್ ಮಾತನಾಡಿ ಮಹಿಳೆಯರ ಆರೋಗ್ಯ ಸುಧಾರಣೆಗಾಗಿ ಮಹಿಳಾ ಆರೋಗ್ಯ ಸೇವೆಗಳಿಗಾಗಿ ರಾಜ್ಯಾದ್ಯಂತ ೧೨೮ ನಗರ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಎಲ್ಲಾ ವಯಸ್ಸಿನ ಹೆಣ್ಣು ಮಕ್ಕಳಿಗೆ ಹಾಗೂ ಮಹಿಳೆಯರಿಗೆ ಆರೋಗ್ಯ ಸೇವೆಯನ್ನು ಒದಗಿಸಲು "ಆಯು?್ಮತಿ ಕ್ಲಿನಿಕ್" ಆರೋಗ್ಯ ಕೇಂದ್ರ ಸ್ಥಾಪಿಸಲಾಗಿದೆ ಎಂದರು.

ಈ ಕ್ಲಿನಿಕ್‌ನಲ್ಲಿ ಉಚಿತವಾಗಿ ಆಪ್ತ ಸಮಾಲೋಚನೆ, ಲ್ಯಾಬ್ ಪರೀಕ್ಷೆಗಳು, ಔ?ಧಿ, ಕ್ಷೇಮ ಚಟುವಟಿಕೆಗಳಾದ ಯೋಗ ಮತ್ತು ಧ್ಯಾನ ಹಾಗೂ ರೆಫೆರಲ್ ಸೇವೆಗಳು ಲಭ್ಯವಿರುತ್ತದೆ ಎಂದು ತಿಳಿಸಿದರು.

ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರು ’ಆಯುಷ್ಮತಿ ಕ್ಲಿನಿಕ್’ ಮಹತ್ವದ ಬಗ್ಗೆ ಮಾಹಿತಿ ಪಡೆದರು. ನಗರಸಭೆ ಉಪಾಧ್ಯಕ್ಷರಾದ ಸವಿತಾ ರಾಕೇಶ್, ಸದಸ್ಯರಾದ ಕಲಾವತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸತೀಶ್ ಕುಮಾರ್, ಜಿಲ್ಲಾ ಸರ್ಜನ್ ಡಾ.ನಂಜುಂಡಯ್ಯ, ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ.ಆನಂದ್, ವೈದ್ಯಾಧಿಕಾರಿಗಳು, ಆರೋಗ್ಯ ಸಿಬ್ಬಂದಿ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net