ಅಯ್ಯಪ್ಪ ಸ್ವಾಮಿ ಭಕ್ತರಿಂದ ಪ್ರತಿಭಟನೆ

ayyappa
Published on

ಹುಬ್ಬಳ್ಳಿ: ಸಾಮಾಜಿಕ ಜಾಲತಾಣದಲ್ಲಿ ಅಯ್ಯಪ್ಪ ಸ್ವಾಮಿ ಬಗ್ಗೆ ಅವಹೇಳನಕಾರಿ ಪೋಸ್ಟ್ ಹಾಕಿದ ವಿಜಯಪುರ ಜಿಲ್ಲೆಯ ಸಿಂದಗಿ ನಿವಾಸಿ ಜಗದೀಶ ಕಲಬುರಗಿ ಎಂಬಾತನ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಭಾರತೀಯ ಅಯ್ಯಪ್ಪ ಸೇವಾ ಸಂಘ ಸದಸ್ಯರು ಹುಬ್ಬಳ್ಳಿಯಲ್ಲಿ ಶನಿವಾರ ಪ್ರತಿಭಟನೆ ನಡೆಸಿದರು.

ನಗರದ ರೈಲ್ವೆ ನಿಲ್ದಾಣದಿಂದ ಪ್ರತಿಭಟನಾ ಮೆರವಣಿಗೆಯಲ್ಲಿ ಮಿನಿವಿಧಾನ ಸೌಧಕ್ಕೆ ಆಗಮಿಸಿದರು.

ಸಂಘದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಶಿವಪ್ಪ ರ್ಬಾ ಮಾತನಾಡಿ, ಜಗದೀಶ ಕಲಬುರಗಿ ಎಂಬ ವ್ಯಕ್ತಿಗೆ ಬಹುಷಃ ತಂದೆ, ತಾಯಿ ಹಾಗೂ ಯಾರು ಹೇಳುವವರು-ಕೇಳುವವರು ಇಲ್ಲ ಅನಿಸುತ್ತದೆ. ದೇವರು ಹಾಗೂ ಗುರು ಬಗ್ಗೆ ನಂಬಿಕೆ ಇಲ್ಲದವರು ಇಂತಹ ಮಾತುಗಳನ್ನಾಡುತ್ತಾರೆ. ಹೆಚ್ಚು ಪ್ರಚಾರ ಪಡೆಯುವ ಸಲುವಾಗಿ ಸನಾತ ಧರ್ಮ ಹಾಗೂ ದೇವರ ಬಗ್ಗೆ ಮಾತನಾಡುತ್ತಿದ್ದಾರೆ. ಇದು ಸರಿಯಲ್ಲ. ಯಾವುದೇ ಧರ್ಮದ ಬಗ್ಗೆ ಹಗುರವಾಗಿ ಮಾತನಾಡಬಾರದು ಎಂದರು.

ಈಗಾಗಲೇ ಜಗದೀಶ ವಿರುದ್ಧ ಪ್ರಕರಣ ದಾಖಲಾಗಿದ್ದು, ಬಂಧನ ಸಹ ಮಾಡಲಾಗಿದೆ. ಮುಂದೆ ಈ ರೀತಿ ಆಗದಂತೆ ಕಠಿಣ ಶಿಕ್ಷೆ ವಿಧಿಸಬೇಕು. ಇಲ್ಲವಾದಲ್ಲಿ ಉಗ್ರ ಹೋರಾಟ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದರು.

ತಹಶೀಲ್ದಾರ ಮೂಲಕ ಗೃಹ ಸಚಿವರಿಗೆ ಮನವಿ ಸಲ್ಲಿಸಿದರು. ಪ್ರತಿಭಟನೆಯಲ್ಲಿ ಆನಂದ ಗುರು ಸ್ವಾಮಿ, ಉಮೇಶ ಬಿ., ಮೋಹನ ಗುರುಸ್ವಾಮಿ, ರಾಮಚಂದ್ರ ಕೆ., ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net