ಕೆಎಲ್ಇ ಶಿಕ್ಷಣ ಮಹಾವಿದ್ಯಾಲಯ ಸಾಧನೆ

img_1758038591883_1.jpg
Published on

ಹುಬ್ಬಳ್ಳಿ: ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯ 2022-24ನೇ ಸಾಲಿನ ಬಿ.ಇಡಿ ಪರೀಕ್ಷೆಯ ಫಲಿತಾಂಶ ಪ್ರಕಟಿಸಿದ್ದು, ಇದರಲ್ಲಿ ಎರಡು ರ್ಯಾಂಕ್ ಗಳಿಸುವ ಮೂಲಕ ಇಲ್ಲಿಯ ವಿದ್ಯಾನಗರದ ಕೆಎಲ್ಇ ಸಂಸ್ಥೆಯ ಶಿಕ್ಷಣ ಮಹಾವಿದ್ಯಾಲಯ ವಿದ್ಯಾರ್ಥಿಗಳು ಮಹತ್ತರ ಸಾಧನೆ ಮಾಡಿದ್ದಾರೆ.

ಕಾಲೇಜಿನ ವಿದ್ಯಾರ್ಥಿಗಳಾದ ಸವಿತಾ ಚವ್ಹಾಣ ಶೇ. 92.38 ಅಂಕ ಗಳಿಸಿ ವಿಶ್ವವಿದ್ಯಾಲಯಕ್ಕೆ ಎಂಟನೇ ರ್ಯಾಂಕ್ ಹಾಗೂ ವಿಜಯ ಮಲ್ಲಾಡದ ಶೇ. 92.13 ಅಂಕದೊಂದಿಗೆ ಹತ್ತನೇ ರ್ಯಾಂಕ್ ಪಡೆದಿದ್ದಾರೆ.

ವಿದ್ಯಾರ್ಥಿಗಳ ಸಾಧನೆಗೆ ಸಂಸ್ಥೆಯ ಕಾರ್ಯಾಧ್ಯಕ್ಷ ಡಾ. ಪ್ರಭಾಕರ ಕೋರೆ. ಎಲ್.ಜಿ.ಬಿ ಚೇರ್ಮನ್ ಜಯಾನಂದ ಮುನವಳ್ಳಿ, ಸದಸ್ಯ ಕಾರ್ಯದರ್ಶಿ ಎಂ.ಎಸ್. ಬಳಿಗಾರ ಹಾಗೂ ಪ್ರಾಚಾರ್ಯ ಡಾ. ಲಿಂಗರಾಜ ಮುಳ್ಳಳ್ಳಿ ಅಭಿನಂದಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net