ಪರಿಸರ ಸಂರಕ್ಷಣೆಯಿಂದ ಮನುಕುಲದ ಉದ್ಧಾರ - ಡಾ.ಶ್ರೀ ಧರ್ಮಪಾಲನಾಥ ಸ್ವಾಮೀಜಿ

mng-5june-bgs
Published on



ಮಂಗಳೂರು : ಪರಿಸರ ಸಂರಕ್ಷಣೆಯಿಂದ ಮನುಕುಲದ ಉದ್ಧಾರವಾಗುತ್ತದೆ. ಗಿಡಮರಗಳನ್ನು ಬೆಳೆಸಿ ಸಂರಕ್ಷಣೆ ಮಾಡುವುದರಿಂದ ಪರಿಸರ ಸಮತೋಲನ ಸಾಧ್ಯವಾಗುತ್ತದೆ .ಇಂದು ಪ್ರಕೃತಿ ವಿಕೃತಿಯ ರೂಪವನ್ನು ಪಡೆದುಕೊಳ್ಳುತ್ತಿದೆ.
ಮಾನವನ ಸ್ವಾರ್ಥದಿಂದ ಪರಿಸರ, ಪಶು ಪಕ್ಷಿಗಳು ವಿನಾಶದ ಅಂಚಿಗೆ ತಲುಪುತ್ತಿವೆ . ಈ ನಿಟ್ಟಿನಲ್ಲಿ ಪರಿಸರ ಸಂರಕ್ಷಣೆಯಲ್ಲಿ ವಿದ್ಯಾರ್ಥಿಗಳ ಪಾತ್ರ ಬಹಳ ಮುಖ್ಯವಾಗಿದೆ ಎಂದು ಆದಿಚುಂಚನಗಿರಿ ಕಾವೂರು ಶಾಖಾ ಮಠದ ಡಾ.ಶ್ರೀ ಧರ್ಮಪಾಲನಾಥ ಸ್ವಾಮೀಜಿ ಹೇಳಿದರು.
ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಬುಧವಾರ ನಗರದ ಬಿಜಿಎಸ್ ಎಜುಕೇಶನ್ ಸೆಂಟರ್‌ನಲ್ಲಿ ನಡೆದ ವನಮಹೋತ್ಸವ
ಕಾರ್ಯಕ್ರಮ ಉದ್ಘಾಟಿಸಿ ಅವರ ಆಶೀರ್ವಚನ ನೀಡಿದರು
ನಾವು ಒಂದು ಬೀಜವನ್ನು ಭೂಮಿಯಲ್ಲಿ ಬಿತ್ತಿದರೆ ಅದು ಮನುಕುಲಕ್ಕೆ ದುಪ್ಪಟ್ಟು ಫಲವನ್ನು ಕೊಡುತ್ತದೆ ಆದ್ದರಿಂದಲೇ ಬಾಲಗಂಗಾಧರನಾಥ ಮಹಾ ಸ್ವಾಮೀಜಿಯವರು ರಾಜ್ಯದಲ್ಲಿ 5 ಕೋಟಿ ಗಿಡಗಳನ್ನು ನೆಟ್ಟು ಬೆಳೆಸಿ ಜಗಕ್ಕೆ ಮಾದರಿಯಾದರು ಎಂದು ಅವರು ಹೇಳಿದರು.
ಬಿಜಿಎಸ್ ಸಂಸ್ಥೆಯವರ ಸ್ಥಾಪಕರಾದ ಸುಬ್ಬ ಕಾರಡ್ಕ , ಬಿಜಿಎಸ್ ಎಜುಕೇಶನ್ ಸೆಂಟರ್‌ನ ಪ್ರಾಂಶುಪಾಲೆ ರೇಷ್ಮಾ ಸಿ ನಾಯರ್
ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net