ಜು.31ರಂದು ಬಿ.ಕೆ.ದೇವ ರಾವ್ : ಮಂಗಳೂರು ಪ್ರೆಸ್ ಕ್ಲಬ್ ಗೌರವ ಅತಿಥಿ

mng-28july-deva rao
Published on



ಮಂಗಳೂರು : ಮಂಗಳೂರು ಪ್ರೆಸ್ ಕ್ಲಬ್ ವತಿಯಿಂದ ಜು.31ರಂದು ಬೆಳಗ್ಗೆ 11.30ಕ್ಕೆ ನಗರದ ಪತ್ರಿಕಾ ಭವನದಲ್ಲಿ ನಡೆಯುವ
ಪ್ರೆಸ್ ಕ್ಲಬ್ ಗೌರವ ಅತಿಥಿ ಕಾರ್ಯಕ್ರಮದಲ್ಲಿ ಭತ್ತದ ತಳಿ ಸಂರಕ್ಷಕ, ಬೆಳ್ತಂಗಡಿ ತಾಲೂಕಿನ ಮಿತ್ತಬಾಗಿಲು ಬಿ.ಕೆ.ದೇವ ರಾವ್
ಭಾಗವಹಿಸಿ ಸಂವಾದ ನಡೆಸಲಿದ್ದಾರೆ. ಸ್ವಸ್ತಿಕಾ ನ್ಯಾಶನಲ್ ಬ್ಯುಸಿನೆಸ್ ಸ್ಕೂಲ್‌ನ ಚೇರ್ಮನ್ ಡಾ.ರಾಘವೇಂದ್ರ ಹೊಳ್ಳ .ಎನ್.
ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ.ಹರೀಶ್ ರೈ ಅಧ್ಯಕ್ಷತೆ ವಹಿಸುವರು.
ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ, ಪತ್ರಿಕಾ ಭವನ ಟ್ರಸ್ಟ್ ಅಧ್ಯಕ್ಷ ರಾಮಕೃಷ್ಣ .ಆರ್.ಉಪಸ್ಥಿತರಿರುವರು ಎಂದು ಪ್ರೆಸ್ ಕ್ಲಬ್ ಪ್ರಧಾನ ಕಾರ್ಯದರ್ಶಿ ಇಬ್ರಾಹಿಂ ಅಡ್ಕಸ್ಥಳ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net