ಕಲಬುರಗಿಯಲ್ಲಿ ಇಂದು ಹರಿಪ್ರಸಾದ ನೇತೃತ್ವದಲ್ಲಿ ಅತಿ ಹಿಂದುಳಿದ ವರ್ಗಗಳ ಪ್ರಮುಖರ ಸಭೆ

BK Hariprasad
Published on


ವಿಜಯವಾಣಿ ಸುದ್ದಿಜಾಲ ಕಲಬುರಗಿ

ಸೆ. ೯ರಂದು ಬೆಂಗಳೂರಿನಲ್ಲಿ  ಆಯೋಜಿಸಿರುವ ತೀರಾ ಮತ್ತು ಅತಿ ಹಿಂದುಳಿದ ವರ್ಗಗಳ ಸಮಾವೇಶ ಹಿನ್ನೆಲೆಯಲ್ಲಿ ಶಾಸಕ ಹಾಗೂ ಈಡಿಗ ಸಮುದಾಯದ ನಾಯಕ ಬಿ.ಕೆ. ಹರಿಪ್ರಸಾದ ಅವರು ಶನಿವಾರ ಬೆಳಗ್ಗೆ ಕಲಬುರಗಿಗೆ ಆಗಮಿಸಲಿದ್ದಾರೆ‌.

ಸಚಿವ ಸ್ಥಾನ ಸಿಗದೆ ಮುನಿಸಿಕೊಂಡಿರುವ ಅವರು ಈಗಾಗಲೇ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಶಿವಕುಮಾರ್ ವಿರುದ್ದ ಮಾತಿನ ದಾಳಿ ನಡೆಸಿರುವ ಅವರು ಅತಿ ಹಿಂದುಳಿದವರ ಸಮಾವೇಶ ಮೂಲಕ ಸಮುದಾಯಗಳ ಸಂಘಟನೆಗೆ ಮುಂದಾಗಿದ್ದಾರೆ. ಅವರಿಗೆ ಕಲಬುರಗಿಯ ಪ್ರಣವಾನಂದ‌ ಸ್ಚಾಮೀಜಿ ಬೆಂಬಲ ನೀಡಿದ್ದಾರೆ. ಹೀಗಾಗಿ ಹರಿಪ್ರಸಾದ ಭೇಟಿ ಕುತೂಹಲ ಕೆರಳಿಸಿದೆ.

ಸಂಜೆ ೪ ಗಂಟೆಗೆ ಕಲಬುರಗಿ ನಗರದ ಜಗತ್ ವೃತ್ತದ ಬಳಿಯ ಆಮಂತ್ರಣ ಹೋಟೆಲ್‌ನಲ್ಲಿ ಹಿಂದುಳಿದ ವರ್ಗಗಳ ಸಮಾಜದ ಮುಖಂಡರುಗಳ ಸಭೆ ಕರೆಯಲಾಗಿದೆ. ಸಭೆಯಲ್ಲಿ ಹರಿಪ್ರಸಾದ ಭಾಗಿಯಾಗುವರು..

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net