

ಮದ್ದೂರು : ತಾಲೂಕಿನ ಕೊಪ್ಪ ಹೋಬಳಿಯ ಬೆಕ್ಕಳಲೆ ಗ್ರಾಮದ ಪ್ರಾಥಮಿಕ ವಿವಿಧೋದ್ದೇಶ ಕೃಷಿ ಪತ್ತಿನ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಬಿ.ಎಂ.ರಮೇಶ್ ಅವಿರೋಧವಾಗಿ ಆಯ್ಕೆಯಾದರು.
ಯೋಗೇಶ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ ಹಿನ್ನೆಲೆಯಲ್ಲಿ ಸಂಘದ ಸಭಾಂಗಣದಲ್ಲಿ ಬುಧವಾರ ನಡೆದ ಚುನಾವಣೆಯಲ್ಲಿ ರಮೇಶ್ ಹೊರತುಪಡಿಸಿ ಬೇರೆ ಯಾರು ನಾಮಪತ್ರ ಸಲ್ಲಿಸದ ಹಿನ್ನೆಲೆಯಲ್ಲಿ ಚುನಾವಣಾಧಿಕಾರಿ ಎಚ್.ಎಸ್.ದೀಪು ಅವರು ರಮೇಶ್ ಅಧ್ಯಕ್ಷ ಎಂದು ಘೋಷಣೆ ಮಾಡಿದರು.
ನೂತನ ಅಧ್ಯಕ್ಷ ಬಿ.ಎಂ.ರಮೇಶ ಅಭಿನಂದನೆ ಸ್ವೀಕರಿಸಿ ಮಾತನಾಡಿ, ಸಂಘದ ಎಲ್ಲ ನಿರ್ದೇಶಕರ ವಿಶ್ವಾಸ ಪಡೆದು ಸಂಘದ ಸಮಗ್ರ ಅಭಿವೃದ್ಧಿಗೆ ಶ್ರಮಿಸಲಾಗುವುದು. ಸರ್ಕಾರದ ಎಲ್ಲ್ಲ ಸವಲತ್ತುಗಳನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸಲು ನಿರಂತರವಾಗಿ ಶ್ರಮಿಸಲಾಗುವುದು ಎಂದರು.
ತಾಲೂಕು ಪಂಚಾಯಿತಿ ಉಪಾಧ್ಯಕ್ಷ ಬಿ.ಎಂ ರಘು, ಪಿಎಲ್‌ಡಿ ಬ್ಯಾಂಕ್ ನಿರ್ದೇಶಕ ರಾಜಶೇಖರ ಹಾಗೂ ಸಂಘದ ನಿರ್ದೇಶಕರು ಇದ್ದರು.