

ಬೆಂಗಳೂರು: ಬಿಎಂಶ್ರೀ ಪ್ರತಿಷ್ಠಾನ ವತಿಯಿಂದ ನೀಡಲಾಗುವ ಸೂ.ವೆಂ. ಆರಗ ವಿಮರ್ಶಾ ಪ್ರಶಸ್ತಿಗೆ ವಿಮರ್ಶಾ ಕೃತಿಗಳನ್ನು ಆಹ್ವಾನಿಸಲಾಗಿದೆ. ಪ್ರಶಸ್ತಿಯು 10 ಸಾವಿರ ರೂ. ನಗದು ಹಾಗೂ ಫಲಕ ಒಳಗೊಂಡಿರಲಿದೆ. 2024ರ ಜನವರಿಯಿಂದ ಡಿಸೆಂಬರ್ ಅವಧಿಯಲ್ಲಿ ಮೊದಲ ಆವೃತ್ತಿಯಾಗಿ ಪ್ರಕಟಗೊಂಡ ಉತ್ತಮ ವಿಮರ್ಶಾ ಕೃತಿಗೆ ಗೌರವ ಲಭಿಸಲಿದೆ. ಆಸಕ್ತರು ಕೃತಿಯ ಮೂರು ಪ್ರತಿಗಳು ಹಾಗೂ ವಿಳಾಸಸಹಿತ ವಿವರವನ್ನು ಏ.5 ರೊಳಗೆ ಗೌರವ ಕಾರ್ಯದರ್ಶಿ, ಬಿಎಂಶ್ರೀ ಪ್ರತಿಷ್ಠಾನ, 3ನೇ ಮುಖ್ಯರಸ್ತೆ, ನರಸಿಂಹರಾಜ ಕಾಲನಿ, ಬೆಂಗಳೂರು-4 ಈ ವಿಳಾಸಕ್ಕೆ ಕಳುಹಿಸಬೇಕು. ವಿವರಗಳಿಗೆ ದೂ: 99728 12127 ಸಂಪರ್ಕಿಸಿ.