ಪೊಲೀಸರ ಬಿ ರಿಪೋರ್ಟ್ ತಿರಸ್ಕೃತ - ಬಿಜೆಪಿ ಕಾರ್ಯಕರ್ತರನ್ನು ಡಿವೈಎಸ್‌ಪಿ ಕಚೇರಿಯಲ್ಲಿ ಥಳಿಸಿದ ಪ್ರಕರಣ

Published on

ಪುತ್ತೂರು: ಬಿಜೆಪಿ ನಾಯಕರ ಭಾವಚಿತ್ರವಿದ್ದ ಶ್ರದ್ಧಾಂಜಲಿ ಬ್ಯಾನರ್‌ಗೆ ಚಪ್ಪಲಿ ಹಾರ ಹಾಕಿದ ಘಟನೆಗೆ ಸಂಬಂಽಸಿ ಪೊಲೀಸರಿಂದ ಥಳಿತಕ್ಕೊಳಗಾದ ಪ್ರಕರಣದಲ್ಲಿ ಸಲ್ಲಿಕೆಯಾದ ಬಿ ರಿಪೋರ್ಟ್ ಅನ್ನು ತಿರಸ್ಕರಿಸಿದ ಪುತ್ತೂರು ೫ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ವಿಶೇಷ ಪ್ರಕರಣವೆಂದು ಪರಿಗಣಿಸಿ ಮಾ.೧೦ಕ್ಕೆ ಖುದ್ದು ಹಾಜರಾಗುವಂತೆ ಮೂವರಿಗೆ ಸಮನ್ಸ್ ಜಾರಿ ಮಾಡಿ ಆದೇಶಿದೆ.

ಪುತ್ತೂರು ಪೊಲೀಸ್ ಉಪಾಽಕ್ಷಕ ವೀರಯ್ಯ ಹಿರೇಮಠ, ಪುತ್ತೂರು ಗ್ರಾಮಾಂತರ ಠಾಣೆ ಉಪನಿರೀಕ್ಷಕ ಶ್ರೀನಾಥ ರೆಡ್ಡಿ, ಸಿಬ್ಬಂದಿ ಹರ್ಷಿತ್ ಮೇಲೆ ಬಂಽತರಿಗೆ ಚಿತ್ರಹಿಂಸೆ ನೀಡಿರುವ ವಿಚಾರದಲ್ಲಿ ನಗರ ಠಾಣೆಯಲ್ಲಿ ನರಿಮೊಗರು ನಿವಾಸಿ ಅಬಿ ಯಾನೆ ಅವಿನಾಶ್ ನೀಡಿದ ದೂರಿನಂತೆ ಪ್ರಕರಣ ದಾಖಲಾಗಿತ್ತು. ಇದರ ತನಿಖೆ ನಡೆಸಿದ ಪೊಲೀಸ್ ಅಽಕಾರಿಗಳು ಈ ದೂರು ಸುಳ್ಳಾಗಿದ್ದು, ತನಿಖೆ ನಡೆಸಲು ತಕ್ಕುದಲ್ಲ, ಕಾನೂನಿನ ತಪ್ಪು ತಿಳಿವಳಿಕೆಯೆಂದು ಕ್ರಮ ಜರುಗಿಸತಕ್ಕುದಲ್ಲವೆಂದು ನ್ಯಾಯಾಲಯಕ್ಕೆ ವರದಿ ಸಲ್ಲಿಸಿದ್ದರು.

ದೂರುದಾರರ ಪರಿವಾಗಿ ನಿವೃತ್ತ ಸರ್ಕಾರಿ ಅಭಿಯೋಜಕ ಉದಯಶಂಕರ, ಚಿನ್ಮಯ ರೈ ಈಶ್ವರಮಂಗಲ, ಶಿವಾನಂದ ವಿಟ್ಲ ಆಕ್ಷೇಪಣೆ ಅರ್ಜಿ ಸಲ್ಲಿಕೆ ಮಾಡಿದ್ದರು. ನ್ಯಾಯಾಲಯ ದೂರುದಾರರಿಂದ ಹೇಳಿಕೆಯನ್ನು ದಾಖಲಿಸಿಕೊಂಡು ಪ್ರಕರಣದಲ್ಲಿ ಸತ್ಯಾಂಶವಿರುವುದನ್ನು ಮನಗಂಡು ವಿಶೇಷ ಪ್ರಕರಣವೆಂದು ಪರಿಗಣಿಸಿ ಕೃತ್ಯದಲ್ಲಿ ಭಾಗಿಯಾದ ಮೂವರು ಪೊಲೀಸ್ ಅಽಕಾರಿಗಳು ಖುದ್ದು ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ಜಾರಿಮಾಡಿ ನ್ಯಾಯಾಽಶೆ ಸರಿತಾ ಡಿ. ಆದೇಶಿದ್ದಾರೆ.

ಪ್ರಕರಣದ ಹಿನ್ನಲೆ

೨೦೨೩ರ ವಿಧಾನಸಭೆ ಚುನಾವಣೆಯಲ್ಲಿ ಪುತ್ತೂರಿನಲ್ಲಿ ಬಿಜೆಪಿ ಹೀನಾಯ ಸೋಲು ಕಂಡ ಹಿನ್ನೆಲೆಯಲ್ಲಿ ನೊಂದ ಕಾರ್ಯಕರ್ತರು ಬಿಜೆಪಿ ನಾಯಕರ ಭಾವಚಿತ್ರವಿದ್ದ ಶ್ರದ್ಧಾಂಜಲಿ ಬ್ಯಾನರ್‌ಗೆ ಚಪ್ಪಲಿ ಹಾರ ಹಾಕಿ ಆಕ್ರೋಶ ವ್ಯಕ್ತಪಡಿಸಿದ್ದರು. ಇದಕ್ಕೆ ಸಂಬಂಽಸಿ ೯ ಮಂದಿಯನ್ನು ವಶಕ್ಕೆ ಪಡೆದು ಪುತ್ತೂರು ಪೊಲೀಸ್ ಉಪಅಽಕ್ಷಕರ ಕಚೇರಿಯಲ್ಲಿ ಥಳಿಸಲಾಗಿತ್ತು. ಇದರಲ್ಲಿ ಇಬ್ಬರು ಗಾಯಗೊಂಡು ಆಸ್ಪತ್ರೆ ಸೇರಿದ್ದರು. ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್ ಆಗುತ್ತಿದ್ದಂತೆ ಮೂವರು ಪೊಲೀಸ್ ಅಽಕಾರಿಗಳ ಮೇಲೆ ಪ್ರಕರಣ ದಾಖಲಾಗಿತ್ತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net