

ಬೆಂಗಳೂರು: ರಾಜ್ಯದಲ್ಲಿ ನಿರಂತರ ಮಳೆ, ನೆರೆಯ ಮಹಾರಾಷ್ಟ್ರದಲ್ಲಿ ವರುಣನ ಅಬ್ಬರದ ಕಾರಣಕ್ಕೆ ಕೃಷ್ಣಾ ಸೇರಿ ಹಲವು ನದಿ-ಹಳ್ಳಗಳು ಉಕ್ಕಿ ಹರಿಯುತ್ತಿದ್ದು, ಪ್ರವಾಹಬಾಧಿತ ಜಿಲ್ಲೆಗಳಲ್ಲಿ ಅಗತ್ಯ ತುರ್ತು ಕ್ರಮವಹಿಸಲು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೂಚಿಸಿದ್ದಾರೆ.
ಕೃಷ್ಣಾ ನದಿ ಪಾತ್ರದಲ್ಲಿ ಪ್ರವಾಹ ಹೆಚ್ಚಾದ ಕಾರಣ ಬೆಳಗಾವಿ ಜಿಲ್ಲಾಧಿಕಾರಿ ಜತೆಗೆ ಸಿಎಂ ಬಿಎಸ್ವೈ ಮಾತನಾಡಿ ಪ್ರವಾಹ ನದಿನಪಾತ್ರದ ಹಳ್ಳಿಗಳಲ್ಲಿ ಹೆಚ್ಚಿನನಿಗಾ ವಹಿಸುವಂತೆ ಸೂಚನೆ ನೀಡಿದರು.
ಸರ್ಕಾರದಿಂದ ಹೆಚ್ಚಿನ ನೆರವು ಬೇಕಾದಲ್ಲಿ ಕೂಡಲೇ ಕರೆ ಮಾಡುವಂತೆಯೂ ಸಲಹೆಯಿತ್ತರು. ಪ್ರವಾಹ ಪೀಡಿತ ಇತರ ಜಿಲ್ಲೆಗಳ ಜಿಲ್ಲಾಧಿಕಾರಿಗಳಿಂದಲೂ ಸಿಎಂ ಬಿಎಸ್ ವೈ ಮಾಹಿತಿ ಪಡೆಯುತ್ತಿದ್ದಾರೆ.