

ಆಲೂರು: ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ತಮ್ಮ ಅಧಿಕಾರದ ಅವಧಿಯಲ್ಲಿ ಅಂಗವಿಕಲರು, ವಿಧವೆಯರು, ದೀನ ದಲಿತರು, ಮಹಿಳೆಯರು, ಬಡವರ ಜನಮಾನಸದಲ್ಲಿ ಶಾಶ್ವತವಾಗಿ ಉಳಿಯುವಂತಹ ಯೋಜನೆಗಳನ್ನು ಜಾರಿಗೆ ತಂದಿದ್ದರು ಎಂದು ಆಲೂರು ಕಟ್ಟಾಯ ಮಂಡಲ ಬಿಜೆಪಿ ಅಧ್ಯಕ್ಷ ಹುಲ್ಲಹಳ್ಳಿ ನಾಗರಾಜ್ ತಿಳಿಸಿದರು.
ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ 81ನೇ ವರ್ಷದ ಹುಟ್ಟುಹಬ್ಬದ ಅಂಗವಾಗಿ ಪಟ್ಟಣದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ತಾಲೂಕು ಬಿಜೆಪಿ ಕಾರ್ಯಕರ್ತರು ಮತ್ತು ಅಭಿಮಾನಿಗಳ ವತಿಯಿಂದ ರೋಗಿಗಳಿಗೆ ಹಣ್ಣು ವಿತರಿಸಿ ಮಾತನಾಡಿದರು.
ರಾಜ್ಯದಲ್ಲಿ ಬರಗಾಲವಿರುವ ಕಾರಣ ಬಿಎಸ್‌ವೈ ಅವರ ಜನ್ಮದಿನವನ್ನು ಸರಳವಾಗಿ ಆಚರಿಸುತ್ತಿದ್ದೇವೆ. ರಾಜ್ಯದ ಅಭಿವೃದ್ಧಿ ದೃಷ್ಟಿಯಿಂದ ಅವರ ಮಾರ್ಗದರ್ಶನ ಬೇಕಿದೆ ಎಂದರು.
ಆಲೂರು ಕಟ್ಟಾಯ ಮಂಡಲ ಬಿಜೆಪಿ ಖಜಾಂಚಿ ಹೇಮಂತ್, ಹಿರಿಯ ಮುಖಂಡರಾದ ಹಳೆಆಲೂರು ರಮೇಶ್, ಅಜಿತ್, ಲೋಕೇಶ್, ಹನುಮಂತೇಗೌಡ, ಪಟ್ಟಣ ಪಂಚಾಯಿತಿ ಸದಸ್ಯ ಹರೀಶ್, ಟಿಎಪಿಸಿಎಂಎಸ್ ಸದಸ್ಯ ಮೋಹನ್ ಮಾವನೂರು, ಬೈರಾಪುರ ಗ್ರಾಮ ಪಂಚಾಯಿತಿ ಸದಸ್ಯ ಗಣೇಶ್, ಬೂತ್ ಅಧ್ಯಕ್ಷ ಪೂವಯ್ಯ, ನಗರ ಅಧ್ಯಕ್ಷ ಲೋಹಿತ್, ತಾಲೂಕು ಆಸ್ಪತ್ರೆ ಆಡಳಿತ ವೈದ್ಯಾಧಿಕಾರಿ ಡಾ.ಜಯಪ್ರಕಾಶ್ ಹಾಜರಿದ್ದರು.