

ಬೆಂಗಳೂರು: ಯಾರು ಭಯಬೀಳಬೇಡಿ ನಿಮ್ಮನ್ನು ಕರೆತರುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರದ ಜತೆ ನಿರಂತರ ಸಂಪರ್ಕದಲ್ಲಿದ್ದೇನೆ ಎಂದು ಆರೋಗ್ಯ ಸಚಿವ ಶ್ರೀರಾಮುಲು ಅವರು ಇಟಲಿಯಲ್ಲಿ ಸಿಲುಕಿರುವ ಕನ್ನಡಿಗರಿಗೆ ಧೈರ್ಯ ತುಂಬಿದರು.
ಮಾಧ್ಯಮದೊಂದಿಗೆ ಮಾತನಾಡಿದ ಅವರು ಇಟಲಿಯ ಮಿಲಾನ್ ಹಾಗೂ ರೋಮ್ನಲ್ಲಿ ಇರುವ ಹಾಗೂ ವಿಮಾನ ನಿಲ್ದಾಣಗಳಲ್ಲಿ ಸಿಲುಕಿರುವ ಕನ್ನಡಿಗರು ಹೆದರುವ ಅವಶ್ಯಕತೆ ಇಲ್ಲ. ಈಗಾಗಲೇ ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್ ಮತ್ತು ವಿದೇಶಾಂಗ ಸಚಿವರಾದ ಎಸ್. ಜೈಶಂಕರ್ ಜತೆ ನಿರಂತರ ಸಂಪರ್ಕದಲ್ಲಿದ್ದೇನೆ. ಎಲ್ಲರನ್ನೂ ಸುರಕ್ಷಿತವಾಗಿ ಕರೆಸಿಕೊಳ್ಳಲಾಗುವುದು ಎಂದು ಹೇಳಿದರು.
ಕನ್ನಡಿಗರನ್ನು ವಿಶೇಷ ವಿಮಾನ ನಿಲ್ದಾಣದ ಮೂಲಕ ಕರೆತರುವ ಪ್ರಯತ್ನ ಮಾಡಲಾಗುತ್ತಿದೆ. ಅದರ ಸಿದ್ಧತೆಯ ಬಗ್ಗೆ ಕೇಂದ್ರದ ಜತೆಗೆ ನಿರಂತರ ಸಂಪರ್ಕದಲ್ಲಿದ್ದೇನೆ. ಯಾರು ಕೂಡ ಭಯ ಬೀಳಬೇಡಿ ಇಡೀ ಕರ್ನಾಟಕ ಸರ್ಕಾರವೇ ನಿಮ್ಮ ಜತೆಗಿದೆ ಎಂದು ಶ್ರೀರಾಮುಲು ಅವರು ಭರವಸೆ ನೀಡಿದರು.