ಬಿಜೆಪಿಯನ್ನೇ ಸೋಲಿಸಲು ವಿಜಯೇಂದ್ರ ಹಣಸಹಾಯ!: ಯತ್ನಾಳ್ ಅಚ್ಚರಿಯ ಆರೋಪ

Yatnal 1
Published on

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಪುತ್ರ ಹಾಗೂ ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಬಿಜೆಪಿಯನ್ನು ಸೋಲಿಸುವುದಕ್ಕಾಗಿ ಹಣಸಹಾಯ ಮಾಡಿದ್ದಾರೆ ಎನ್ನುವ ಗಂಭೀರ ಆರೋಪವನ್ನು ಅದೇ ಪಕ್ಷದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮಾಡಿದ್ದಾರೆ.

ಆದರೆ ಅದು ನಮ್ಮ ರಾಜ್ಯದಲ್ಲಿ ಬಿಜೆಪಿಯನ್ನು ಸೋಲಿಸುವುದಕ್ಕಲ್ಲ. ಬದಲಾಗಿ ಬಿಹಾರದಲ್ಲಿ ನಡೆದ ಚುನಾವಣೆಯಲ್ಲಿ ತಮ್ಮದೇ ಪಕ್ಷದ ಅಭ್ಯರ್ಥಿಯನ್ನು ಸೋಲಿಸುವುದಕ್ಕಾಗಿ. ವಿಜಯೇಂದ್ರ ತಮ್ಮ ಆಪ್ತರ ಮೂಲಕ ಅಲ್ಲಿಗೆ ಹಣ ಕಳುಹಿಸಿದ್ದಾರೆ ಎಂಬುದು ಯತ್ನಾಳ್ ಆರೋಪದ ತಿರುಳು.

ಬಿಹಾರದಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ವರ್ಚಸ್ಸನ್ನು ಕುಗ್ಗಿಸಲು ವಿಜಯೇಂದ್ರ ಈ ಕೆಲಸ ಮಾಡಿದ್ದಾರೆ. ಅಲ್ಲಿನ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಮತ್ತು ಸ್ಥಳೀಯ ಪಕ್ಷವಾದ ರಾಷ್ಟ್ರೀಯ ಜನತಾದಳದ ಕೆಲವು ಅಭ್ಯರ್ಥಿಗಳಿಗೆ ವಿಜಯೇಂದ್ರ ಹಣ ಕಳಿಸಿಕೊಟ್ಟಿದ್ದಾರೆ ಎಂದು ಯತ್ನಾಳ್ ಆರೋಪಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net