ಅರ್ಥಪೂರ್ಣವಾಗಿ ಬಿ.ವೈ.ವಿಜಯೇಂದ್ರ ಹುಟ್ಟುಹಬ್ಬ ಆಚರಣೆ

ಅರ್ಥಪೂರ್ಣವಾಗಿ ಬಿ.ವೈ.ವಿಜಯೇಂದ್ರ ಹುಟ್ಟುಹಬ್ಬ ಆಚರಣೆ
Published on

ಹಾಸನ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹುಟ್ಟುಹಬ್ಬದ ಅಂಗವಾಗಿ ವಿಜಯೇಂದ್ರ ಅಭಿಮಾನಿ ಬಳಗ ಮತ್ತು ವೀರಶೈವ ಲಿಂಗಾಯತ ಮಹಾವೇದಿಕೆ ವತಿಯಿಂದ ನಗರದ ಕಾಮಧೇನು ವಿದ್ಯಾಶ್ರಮ ಆವರಣದಲ್ಲಿನ ಗಂಗಾಧರೇಶ್ವರ ಸ್ವಾಮಿಗೆ ಬುಧವಾರ ವಿಶೇಷ ಪೂಜೆ ಸಲ್ಲಿಸಿ ಅನ್ನಸಂತರ್ಪಣೆ ನೆರವೇರಿಸಲಾಯಿತು.

ವಕೀಲ ಹಾಗೂ ವೀರಶೈವ ಲಿಂಗಾಯತ ಮಹಾವೇದಿಕೆಯ ರಾಜ್ಯ ಸಮಿತಿಯ ಸದಸ್ಯ ಬಿ.ಆರ್.ವಸಂತ್ ಕುಮಾರ್ ಮಾತನಾಡಿ, ಹುಟ್ಟುಹಬ್ಬದ ಅಂಗವಾಗಿ ರಾಜ್ಯಾದ್ಯಂತ ಹುಣ್ಣಿಮೆ ದಿನವಾದ ಬುಧವಾರ 108 ದೇವಾಲಯಗಳಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು ಎಂದು ವಿವರಿಸಿದರು.

ವೀರಶೈವ ಲಿಂಗಾಯತ ಮಹಾಸಭಾ ಜಿಲ್ಲಾಧ್ಯಕ್ಷ ಕಟ್ಟಾಯ ಶಿವಕುಮಾರ್ ಮಾತನಾಡಿ, ಬಿ.ವೈ.ವಿಜಯೇಂದ್ರ ಯುವ ರಾಜಕಾರಣಿಯಾಗಿ ಹೊಸ ಆಲೋಚನೆಗಳೊಂದಿಗೆ ಬಿಜೆಪಿಯಲ್ಲಿ ತನ್ನದೇ ಆದ ಕೊಡುಗೆಗಳನ್ನು ನೀಡಿದ್ದಾರೆ. ದೇವರು ಅವರಿಗೆ ಆಯಸ್ಸು ಆರೋಗ್ಯ ಕೊಟ್ಟು ಕಾಪಾಡಲಿ ಎಂದು ಹಾರೈಸಿದರು.

ಕಟ್ಟೆಗದ್ದೆ ನಾಗರಾಜ್, ವೀರಶೈವ ಲಿಂಗಾಯತ ಮಹಾ ವೇದಿಕೆ ಜಿಲ್ಲಾಧ್ಯಕ್ಷ ಎಸ್.ಎಸ್.ಪ್ರಸನ್ನ, ತೇಜುಮೂರ್ತಿ, ಹರೀಶ್, ಯೋಗಾನಂದ, ವಿಜಯಣ್ಣ, ಸಂಪತ್, ಸತೀಶ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net