

ಮೈಸೂರು: ಬಿ.ವೈ.ವಿಜಯೇಂದ್ರ ಅವರು ನಗರದ ವಾರ್ಡ್ ಸಂಖ್ಯೆ 42ರ ಬಿಜೆಪಿ ಬೂತ್ ಅಧ್ಯಕ್ಷ ಶಿವಕುಮಾರ್ ಅವರ ಮನೆಗೆ ಭೇಟಿ ನೀಡಿ, ಪಕ್ಷ ಸಂಘಟನೆ ಬಗ್ಗೆ ಚರ್ಚೆ ನಡೆಸಿದರು.
ಸಂಸದ ಪ್ರತಾಪ್ ಸಿಂಹ, ಶಾಸಕ ಟಿ.ಎಸ್.ಶ್ರೀವತ್ಸ , ಮಾಜಿ ಸಂಸದ ಸಿ.ಎಚ್.ವಿಜಯಶಂಕರ್, ಮಾಜಿ ಶಾಸಕರಾದ ಎಲ್.ನಾಗೇಂದ್ರ, ಹರ್ಷವರ್ಧನ್, ಎನ್.ಮಹೇಶ್, ಮಾಜಿ ಮೇಯರ್ ಶಿವಕುಮಾರ್, ಬಿಜೆಪಿ ರಾಜ್ಯ ಉಪಾಧ್ಯಕ್ಷ ಎಂ.ರಾಜೇಂದ್ರ, ಪ್ರಧಾನ ಕಾರ್ಯದರ್ಶಿ ಸಿದ್ದರಾಜು, ಜಿಲ್ಲಾಧ್ಯಕ್ಷೆ ಮಂಗಳಾ ಸೋಮಶೇಖರ್, ಮುಖಂಡರಾದ ಆರ್.ರಘು ಕೌಟಿಲ್ಯ, ಎಲ್.ಆರ್.ಮಹದೇವಸ್ವಾಮಿ, ಎಂ.ಶಿವಣ್ಣ ಇತರರು ಇದ್ದರು.