

ಸವದತ್ತಿ: ಸಾಮಾಜಿಕ ಅಭಿವೃದ್ಧಿಗೆ ಅಂಬೇಡ್ಕರ್ ಕೊಡುಗೆ ಅಪಾರವಾಗಿದೆ. ಅವರ ಆದರ್ಶ ತತ್ತ್ವಗಳು ಯುವ ಜನಾಂಗಕ್ಕೆ ಮಾದರಿಯಾಗಿವೆ ಎಂದು ಶಾಸಕ ವಿಶ್ವಾಸ ವೈದ್ಯ ಹೇಳಿದರು.
ಪಟ್ಟಣದ ಗುರುಭವನದಲ್ಲಿ ತಾಲೂಕು ಆಡಳಿತ ಸೋಮವಾರ ಹಮ್ಮಿಕೊಂಡಿದ್ದ ಡಾ.ಬಿ.ಆರ್.ಅಂಬೇಡ್ಕರ್ ಅವರ 134ನೇ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಭಾರತಕ್ಕೆ ಶ್ರೇಷ್ಠ ಸಂವಿಧಾನ ನೀಡಿದ ಕೀರ್ತಿ ಬಾಬಾಸಾಹೇಬ ಅಂಬೇಡ್ಕರ್ ಅವರಿಗೆ ಸಲ್ಲುತ್ತದೆ. ದೇಶದ ಪ್ರತಿ ಸಮಸ್ಯೆಗೆ ಸಂವಿಧಾನದಲ್ಲಿ ಪರಿಹಾರವಿದೆ. ಹೋರಾಟದ ಮೂಲಕ ದಲಿತರು ಹಾಗೂ ಮಹಿಳೆಯರಿಗೆ ಹಕ್ಕು ದೊರಕಿಸಿದ ಮಹಾನ್ ವ್ಯಕ್ತಿ ಅಂಬೇಡ್ಕರ್ ಅವರು ಶಿಣ ಮತ್ತು ಸಬಲೀಕರಣದಿಂದ ಅಸಮಾನತೆ ಹೋಗಲಾಡಿಸುವಲ್ಲಿ ಶ್ರಮಿಸಿದರು ಎಂದರು. ತಹಸೀಲ್ದಾರ್ ಮಲ್ಲಿಕಾರ್ಜುನ ಹೆಗ್ಗಣ್ಣವರ ಪ್ರಾಸ್ತಾವಿಕವಾಗಿ ಮಾತನಾಡಿದರು.
ಸಾಹಿತಿ ಡಾ.ವೈ.ಎನ್.ಯಾಕೊಳ್ಳಿ ಉಪನ್ಯಾಸ ನೀಡಿದರು. ಮೂವರು ವಿದ್ಯಾರ್ಥಿಗಳಿಗೆ ಲ್ಯಾಪ್ಟ್ಯಾಪ್ ವಿತರಿಸಲಾಯಿತು. ಎಸ್ಸೆಸ್ಸೆಲ್ಸಿಯಲ್ಲಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮಕ್ಕೂ ಮುನ್ನ ಪಟ್ಟಣದಲ್ಲಿನ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆಗೆ ಶಾಸಕ ವಿಶ್ವಾಸ ವೈದ್ಯ ಪುಷ್ಮನಮನ ಸಲ್ಲಿಸಿದರು. ಅಂಬೇಡ್ಕರ್ ನಗರದಿಂದ ಪ್ರಮುಖ ಬೀದಿಗಳಲ್ಲಿ ಸಂಚರಿಸಿತು.
ತಾಪಂ ಇಒ ಆನಂದ ಬಡಕುಂದ್ರಿ, ಬಿಇಒ ಮೋಹನ ದಂಡಿನ, ಯಲ್ಲಮ್ಮ ದೇವಸ್ಥಾನ ಪ್ರಾಧಿಕಾರ ಕಾರ್ಯದರ್ಶಿ ಅಶೋಕ ದುಡಗುಂಟಿ, ಸಮಾಜ ಕಲ್ಯಾಣಾಧಿಕಾರಿ ಆರ್.ಆರ್.ಕುಲಕರ್ಣಿ, ಪುರಸಭೆ ಮುಖ್ಯಧಿಕಾರಿ ಸಂಗನಬಸಯ್ಯ ಗದಗಿಮಠ, ಎಪಿಎಂಸಿ ಅಧ್ಯ ಚಂದ್ರು ಪೂಜೇರ, ಸಿಡಿಪಿಒ ಸುನೀತಾ ಪಾಟೀಲ, ಮುಖಂಡರಾದ ಯಲ್ಲಪ್ಪ ಅಮಾತೆನ್ನವರ, ಯಲ್ಲಪ್ಪ ಗೊರವನಕೊಳ್ಳ, ಬಸವರಾಜ ತಳವಾರ, ಶಿವಾನಂದ ಅಮಾತೆನ್ನವರ, ರಾವೇಂದ್ರ ಪೂಜಾರ, ರವಿ ದೊಡ್ಡಮನಿ, ಅಶೋಕ ಮುತ್ತಿನ ಇತರರಿದ್ದರು.