ಬಾಬಾಸಾಹೇಬ್ ಅಂಬೇಡ್ಕರ್ ವಿಶ್ವನಾಯಕ

14 YLP 03
Published on

ಯಲ್ಲಾಪುರ: ಮಾನವತಾವಾದಿ ಅಂಬೇಡ್ಕರ್ ಕೇವಲ ಒಂದು ಸಮುದಾಯದ ನಾಯಕರಲ್ಲ. ಅವರೊಬ್ಬ ವಿಶ್ವನಾಯಕ ಎಂದು ಜಿಲ್ಲಾ ಉಸ್ತುವಾರಿ ಸಚಿವ ಶಿವರಾಮ ಹೆಬ್ಬಾರ ಹೇಳಿದರು.

ಪಟ್ಟಣದ ತಹಸೀಲ್ದಾರ್ ಕಚೇರಿಯಲ್ಲಿ ಬುಧವಾರ ತಾಲೂಕಾಡಳಿತ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ಅಂಬೇಡ್ಕರ್ ಜಯಂತಿ ಉದ್ಘಾಟಿಸಿ ಅವರು ಮಾತನಾಡಿದರು.

ಕರೊನಾ ಹಿನ್ನೆಲೆಯಲ್ಲಿ ಹಬ್ಬ-ಹರಿದಿನ, ಜಯಂತಿ-ಉತ್ಸವಗಳನ್ನು ಸರಳವಾಗಿ ಆಚರಿಸಲಾಗುತ್ತಿದೆ. ಜನರು ಮುನ್ನೆಚ್ಚರಿಕೆ ಕೈಗೊಳ್ಳುವುದೇ ಕರೊನಾ ನಿಯಂತ್ರಣಕ್ಕೆ ಮಾರ್ಗ ಹೊರತು ಲಾಕ್​ಡೌನ್ ಪರಿಹಾರವಲ್ಲ. ಯಾವುದೇ ಕಾರಣಕ್ಕೂ ರಾಜ್ಯದಲ್ಲಿ ಮತ್ತೆ ಲಾಕ್​ಡೌನ್ ಇಲ್ಲ ಎಂದು ಸರ್ಕಾರದ ನಿಲುವನ್ನು ಪುನರುಚ್ಛರಿಸಿದರು. ತಾಪಂ ಅಧ್ಯಕ್ಷೆ ಚಂದ್ರಕಲಾ ಭಟ್ಟ ಅಧ್ಯಕ್ಷತೆ ವಹಿಸಿದ್ದರು. ಎಂಎಲ್​ಸಿ ಶಾಂತಾರಾಮ ಸಿದ್ದಿ, ಪಪಂ ಅಧ್ಯಕ್ಷೆ ಸುನಂದಾ ದಾಸ್, ಉಪಾಧ್ಯಕ್ಷೆ ಶ್ಯಾಮಿಲಿ ಪಾಟಣಕರ್, ತಾಪಂ ಉಪಾಧ್ಯಕ್ಷೆ ಸುಜಾತಾ ಸಿದ್ದಿ, ತಹಸೀಲ್ದಾರ್ ಶ್ರೀಕೃಷ್ಣ ಕಾಮ್ಕರ್ ಇತರರಿದ್ದರು. ಶಿಕ್ಷಕ ಶ್ರೀಧರ ಹೆಗಡೆ, ತಹಸೀಲ್ದಾರ್ ಕಚೇರಿಯ ಶ್ರೀಧರ ಮಡಿವಾಳ ನಿರ್ವಹಿಸಿದರು.

ಅಸಮಾನತೆ ವಿರುದ್ಧ ಹೋರಾಡಿದ ಧೀಮಂತ

ಶಿರಸಿ: ಅನ್ಯಾಯ, ಅಸಮಾನತೆ, ಶೋಷಣೆಗಳ ವಿರುದ್ಧದ ಹೋರಾಟಗಳಿಗೆ ಡಾ.ಬಿ.ಆರ್. ಅಂಬೇಡ್ಕರ್ ಅವರ ಚಿಂತನೆಯೇ ಬಳುವಳಿಯಾಗಿದೆ ಎಂದು ಸಿದ್ದಾಪುರ ಆಯುರ್ವೆದ ಕಾಲೇಜಿನ ಪ್ರೊ. ರಾಘವೇಂದ್ರ ಎಲ್. ಹೇಳಿದರು.

ನಗರದ ಅಂಬೇಡ್ಕರ್ ಭವನದಲ್ಲಿ ಬುಧವಾರ ಆಯೋಜಿಸಿದ್ದ ಡಾ.ಬಿ.ಆರ್. ಅಂಬೇಡ್ಕರ್ ಜಯಂತಿಯಲ್ಲಿ ಅವರು ಉಪನ್ಯಾಸ ನೀಡಿದರು. ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಜೀವ ವೈವಿಧ್ಯ ಮಂಡಳಿ ಅಧ್ಯಕ್ಷ ಅನಂತ ಅಶೀಸರ, ತಾಲೂಕು ಪಂಚಾಯಿತಿ ಅಧ್ಯಕ್ಷೆ ಶ್ರೀಲತಾ ಕಾಳೇರಮನೆ, ನಗರಸಭೆ ಅಧ್ಯಕ್ಷ ಗಣಪತಿ ನಾಯ್ಕ, ಉಪಾಧ್ಯಕ್ಷೆ ವೀಣಾ ಶೆಟ್ಟಿ, ಜಿಲ್ಲಾ ಪಂಚಾಯಿತಿ ಸದಸ್ಯ ಬಸವರಾಜ ದೊಡ್ಮನಿ, ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ನಂದನ ಸಾಗರ, ಡಿಎಸ್ಪಿ ರವಿ ನಾಯ್ಕ, ಪ್ರಮುಖರಾದ ಮಾಧವ ರೇವಣಕರ ಇತರರಿದ್ದರು. ತಹಸೀಲ್ದಾರ್ ಎಂ.ಆರ್. ಕುಲಕರ್ಣಿ ಸ್ವಾಗತಿಸಿದರು. ರಾಜೇಶ್ವರಿ ಮಡಿವಾಳ ನಿರೂಪಿಸಿದರು.

ಶೋಷಿತ ಜನಾಂಗದ ಹಿತಚಿಂತಕ

ಹೊನ್ನಾವರ: ದೇಶದಲ್ಲಿ ಜನರಿಗೆ ಸಾಮಾಜಿಕ ಭದ್ರತೆ ಒದಗಿಸುವಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಪಾತ್ರ ದೊಡ್ಡದಿದೆ ಎಂದು ಕಸಾಪ ತಾಲೂಕು ಅಧ್ಯಕ್ಷ ನಾಗರಾಜ ಹೆಗಡೆ ಅಪಗಾಲ ಹೇಳಿದರು.

ಪಟ್ಟಣ ಪಂಚಾಯಿತಿ ಸಭಾಭವನದಲ್ಲಿ ತಾಲೂಕು ಆಡಳಿತ ಮತ್ತು ಸಮಾಜ ಕಲ್ಯಾಣ ಇಲಾಖೆಯಿಂದ ಆಯೋಜಿಸಿದ್ದ ಡಾ. ಬಿ.ಆರ್. ಅಂಬೇಡ್ಕರ್ ಹಾಗೂ ಬಾಬು ಜಗಜೀವನರಾಮ್ ಜಯಂತ್ಯುತ್ಸವದಲ್ಲಿ ಅವರು ಮಾತನಾಡಿದರು. ತಹಸೀಲ್ದಾರ್ ವಿವೇಕ ಶೇಣ್ವಿ, ಪ.ಪಂ. ಉಪಾಧ್ಯಕ್ಷೆ ಮೇಧಾ ನಾಯ್ಕ, ಭಾಗ್ಯ ಮೇಸ್ತ, ಸಮಾಜ ಕಲ್ಯಾಣ ಅಧಿಕಾರಿ ವಿನಾಯಕ ನಾಯ್ಕ ಇದ್ದರು. ಯುವಜನ ಸೇವಾ ಇಲಾಖೆ ಅಧಿಕಾರಿ ಸುಧೀಶ ನಾಯ್ಕ ನಿರ್ವಹಿಸಿದರು.

ದಮನಿತರ ಹಕ್ಕುಗಳಿಗಾಗಿ ಹೋರಾಡಿದ ಮಹಾನಾಯಕ

ಕಾರವಾರ: ಅಂಬೇಡ್ಕರ್ ಜಾತಿ ವ್ಯವಸ್ಥೆ ವಿರುದ್ಧ, ದಮನಿತರ ಹಕ್ಕುಗಳಿಗಾಗಿ ಹೋರಾಟ ನಡೆಸಿದ ಮಹಾನ್ ವ್ಯಕ್ತಿ ಎಂದು ಶಾಸಕಿ ರೂಪಾಲಿ ನಾಯ್ಕ ಹೇಳಿದರು. ನಗರಸಭೆಯಿಂದ ಬಿಎಸ್​ಎನ್​ಎಲ್ ಕಚೇರಿಯ ಸಮೀಪದ ನವೀಕೃತ ಅಂಬೇಡ್ಕರ್ ವೃತ್ತವನ್ನು ಉದ್ಘಾಟಿಸಿ ಅವರು ಮಾತನಾಡಿದರು. ನಗರಸಭೆ ಅಧ್ಯಕ್ಷ ಡಾ. ನಿತಿನ್ ಪಿಕಳೆ, ಉಪಾಧ್ಯಕ್ಷ ಪ್ರಕಾಶ ಪುರ್ಸ ನಾಯ್ಕ, ಸ್ಥಾಯಿ ಸಮಿತಿ ಅಧ್ಯಕ್ಷೆ ಸಂಧ್ಯಾ ಬಾಡಕರ್, ಎಲ್ಲ ಸದಸ್ಯರು, ದಲಿತ ಸಂಘಟನೆಗಳ ಮುಖಂಡರು ಇದ್ದರು.

17 ರವರೆಗೆ ಭೀಮ ಯಾತ್ರೆ

ಜಿಲ್ಲಾ ಎಸ್​ಸಿ ಮೋರ್ಚಾದಿಂದ ಅಂಬೇಡ್ಕರ್ ಭೀಮ ಯಾತ್ರೆಗೆ ಶಾಸಕಿ ರೂಪಾಲಿ ನಾಯ್ಕ ಚಾಲನೆ ನೀಡಿದರು. ಅಂಬೇಡ್ಕರ್ ಅವರ 130 ನೇ ಜಯಂತಿಯ ಅಂಗವಾಗಿ ಈ ಯಾತ್ರೆ ನಡೆಯುತ್ತಿದ್ದು, ಏ.17 ರವರೆಗೆ ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ಸಂಚಾರ ಮಾಡಲಿದೆ. ಏ. 15 ರಂದು ಬೆಳಗ್ಗೆ ಹೊನ್ನಾವರ, ಮಧ್ಯಾಹ್ನ ಭಟ್ಕಳ, ಸಂಜೆ ಸಿದ್ದಾಪುರ, ಏ.16 ರಂದು ಬೆಳಗ್ಗೆ ಶಿರಸಿ, ಮಧ್ಯಾಹ್ನ ಮುಂಡಗೋಡ, ಸಂಜೆ ಯಲ್ಲಾಪುರ, ಏ.16 ರಂದು ಬೆಳಗ್ಗೆ ಹಳಿಯಾಳ, ಮಧ್ಯಾಹ್ನ ದಾಂಡೇಲಿ ಸಂಜೆ ಜೊಯಿಡಾ ತಲುಪಲಿದೆ. ಉದಯ ಬಶೆಟ್ಟಿ, ಬಿ.ಎನ್. ಸೂರ್ಯಪ್ರಕಾಶ ಇರುವರು.

ಭಾರತೀಯರಿಗೆ ಚಿರಸ್ಮರಣೀಯರು

ಹಳಿಯಾಳ: ದೇಶದ ಪ್ರಜಾವ್ಯವಸ್ಥೆಗೆ ಭದ್ರ ಬುನಾದಿ ಕಲ್ಪಿಸುವಂತಹ ಸಂವಿಧಾನ ನೀಡಿರುವ ಡಾ. ಬಿ.ಆರ್. ಅಂಬೇಡ್ಕರ್ ಅವರು ಭಾರತೀಯರ ಹೃದಯದಲ್ಲಿ ಸದಾ ಚಿರಸ್ಮರಣೀಯರಾಗಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯ ಎಸ್.ಎಲ್. ಘೊಟ್ನೇಕರ ಹೇಳಿದರು.

ಪಟ್ಟಣದ ಮಿನಿ ವಿಧಾನಸೌಧದಲ್ಲಿ ತಾಲೂಕಾಡಳಿತ, ಸಮಾಜ ಕಲ್ಯಾಣ ಇಲಾಖೆ ಮತ್ತು ವಿವಿಧ ದಲಿತ ಸಂಘಟನೆಗಳ ಆಶ್ರಯದಲ್ಲಿ ಬುಧವಾರ ಆಯೋಜಿಸಿದ್ದ ಡಾ.ಬಿ.ಆರ್. ಅಂಬೇಡ್ಕರ್ ಹಾಗೂ ಡಾ.ಬಾಬು ಜಗಜೀವನರಾಮ್ ಅವರ ಜಯಂತಿ ಆಚರಣೆಗೆ ಚಾಲನೆ ನೀಡಿ ಅವರು ಮಾತನಾಡಿದರು.

ಉಪನ್ಯಾಸಕ ಶಾಂತಾರಾಮ ಚಿಬುಲಕರ ಮಾತನಾಡಿದರು. ತಹಸೀಲ್ದಾರ್ ಪ್ರವೀಣ ಹುಚ್ಚಣ್ಣವರ ಅಧ್ಯಕ್ಷತೆ ವಹಿಸಿದ್ದರು. ತಾಪಂ ಇಒ ಪ್ರವೀಣ ಸಾಲಿ, ಬಿಇಒ ಸಮೀರ ಮುಲ್ಲಾ, ಪುರಸಭೆ ಮುಖ್ಯಾಧಿಕಾರಿ ಕೇಶವ ಚೌಗಲೆ, ಪಿಎಸೈ ಯಲ್ಲಾಲಿಂಗ ಕೊಣ್ಣೂರ, ಅಶೋಕ ಪವಾರ, ಪುರಸಭೆ ಸದಸ್ಯೆ ಶಾಂತಾ ಹಿರೇಕರ, ರಾಜೇಶ್ವರಿ ಹಿರೇಮಠ, ಜಯಲಕ್ಷ್ಮೀ ಚವ್ಹಾಣ, ಅನಿಲ ಚವ್ಹಾಣ, ಸುರೇಶ ತಳವಾರ, ದಲಿತ ಮುಖಂಡರಾದ ಗುರುನಾಥ ದಾನಪ್ಪನವರ, ವಿಲಾಸ ಕಣಗಲಿ, ಮಂಜುನಾಥ ಮೇತ್ರಿ, ಪಿ.ಎಸ್. ದಾನಪ್ಪನವರ, ಮಂಜುನಾಥ ಮೇತ್ರಿ, ಮಾರುತಿ ಕಲಬಾವಿ, ಯಲ್ಲಪ್ಪ ಹೊನ್ನೋಜಿ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net