ಬಾಬು ಜಗಜೀವನ ರಾಮ್ 118 ನೇ ಜನ್ಮ ದಿನಾಚರಣೆ

Babooji
Published on

ಮಡಿಕೇರಿ:

ಬಾಬು ಜಗಜೀವನ ರಾಮ್ ಅವರು ಹಸಿರು ಕ್ರಾಂತಿಯ ಹರಿಕಾರರಾಗಿ, ರಕ್ಷಣಾ ಸಚಿವರಾಗಿ ಉತ್ತಮ ಕೆಲಸ ಮಾಡಿದ್ದಾರೆ ಎಂದು ಮಡಿಕೇರಿ ಶಾಸಕ ಡಾ. ಮಂತರ್ ಗೌಡ ಹೇಳಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ನಗರದ ಗಾಂಧಿಭವನದಲ್ಲಿ ಶನಿವಾರ ಏರ್ಪಡಿಸಿದ್ದ ಹಸಿರುಕ್ರಾಂತಿ ಹರಿಕಾರ ಡಾ.ಬಾಬು ಜಗಜೀವನ ರಾಂ 118 ನೇ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.

ಕಾರ್ಮಿಕ ಸಚಿವರಾಗಿ ದುಡಿಯುವ ವರ್ಗದ ಹಿತರಕ್ಷಣೆ, ಸಮಾಜದ ಶೋಷಿತ ಸಮುದಾಯಗಳ ಧ್ವನಿಯಾಗಿದ್ದ ರಾಷ್ಟçದ ಮಾಜಿ ಉಪ ಪ್ರಧಾನಿ ಡಾ.ಬಾಬು ಜಗಜೀವನ ರಾಮ್ ಅವರ ಜೀವನ ಸಾಧನೆಗಳನ್ನು ಪ್ರತಿಯೊಬ್ಬರೂ ಸ್ಮರಿಸುವಂತಾಗಬೇಕು.

ಸ್ವಾತಂತ್ರö್ಯ ಹೋರಾಟಗಾರರಾಗಿ ಶೋಷಿತರ ಧ್ವನಿಯಾಗಿ, ಮುತ್ಸದಿ ರಾಜಕಾರಣಿಯಾಗಿ ಡಾ.ಬಾಬು ಜಗಜೀವನ ರಾಮ್ ಅವರ ಬದುಕು ಆದರ್ಶ ಮತ್ತು ಮಾದರಿಯಾಗಿದೆ. ಶೋಷಿತ ವರ್ಗಕ್ಕೆ ಸಾಮಾಜಿಕ ನ್ಯಾಯ ದೊರಕಿಸುವಲ್ಲಿ ಅವರು ಶ್ರಮಿಸಿದ್ದು, ಇಂತಹ ಮಹಾನ್ ನಾಯಕರನ್ನು ಸದಾ ಸ್ಮರಿಸುವಂತಾಗಬೇಕು. ಬಾಬು ಜಗಜೀವನ ರಾಮ್ ಅವರು ದೇಶ ಕಂಡ ಮುತ್ಸದ್ಧಿ ನಾಯಕರಾಗಿದ್ದು, ದೀರ್ಘ ಕಾಲ ಕೇಂದ್ರ ಸರ್ಕಾರದಲ್ಲಿ ಕೃಷಿ, ರಕ್ಷಣೆ, ಕಾರ್ಮಿಕ, ಹೀಗೆ ವಿವಿಧ ಇಲಾಖೆಗಳಲ್ಲಿ ಕರ್ತವ್ಯ ನಿರ್ವಹಿಸಿದ್ದಾರೆ. ರಾಷ್ಟçದ ಪ್ರಗತಿಯಲ್ಲಿ ಪ್ರತಿಯೊಬ್ಬರ ಪ್ರಗತಿಯಿದೆ ಎಂದು ಹೇಳುತ್ತಿದ್ದ ಬಾಬೂಜಿ ದೇಶಕ್ಕೆ ಮಾದರಿ ಮತ್ತು ಅನುಕರಣೀಯ ರಾಜಕಾರಣಿ ಎಂದರು.

ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜಿನ ಪ್ರಾಧ್ಯಾಪಕ ಪ್ರೊ. ಶ್ರೀಧರ ಹೆಗಡೆ ಮಾತನಾಡಿ ಹಸಿರು ಕ್ರಾಂತಿಯ ಹರಿಕಾರ ರಾಷ್ಟçದ ಮಾಜಿ ಉಪ ಪ್ರಧಾನಿ ಡಾ.ಬಾಬು ಜಗಜೀವನ ರಾಮ್ ಅವರ ಆದರ್ಶ ಜೀವನ ಮೌಲ್ಯಗಳು ನಮ್ಮೆಲ್ಲರಿಗೂ ಮಾದರಿಯಾಗಿದೆ. ಬಾಬೂಜಿ ಬಿಹಾರದಲ್ಲಿ ಬಡ ಕುಟುಂಬದಲ್ಲಿ ಜನಿಸಿ ಬಾಲ್ಯ ಜೀವನವನ್ನು ಕಷ್ಟದಿಂದಲೇ ಎದುರಿಸಿದವರು. ತಮ್ಮ ಜೀವನದುದ್ದಕ್ಕೂ ಹೋರಾಟದ ಮೂಲಕ ಬೆಳವಣಿಗೆ ಕಂಡು ರಾಜಕೀಯ ಪ್ರವೇಶ ಮಾಡಿ ಕೇಂದ್ರ ಸರ್ಕಾರದ ಸಚಿವ ಸಂಪುಟದಲ್ಲಿ ಅತ್ಯಂತ ಕಿರಿ ವಯಸ್ಸಿನ ಸಚಿವರಾಗಿ ಕಾರ್ಯನಿರ್ವಹಣೆ ಮಾಡಿದ ಸಾಧನೆ ಅವರದ್ದಾಗಿದೆ ಎಂದರು.

ಪ್ರಮುಖರಾದ ಎಚ್.ಎಲ್. ದಿವಾಕರ, ಪ್ರೇಮ ಕೃಷ್ಣಪ್ಪ, ಪ್ರೇಮಕುಮಾರ್, ಮೋಹನ್ ಮೌರ್ಯ, ಎಸಿ ವಿನಾಯಕ ನರ್ವಡೆ, ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕ ಶೇಖರ್, ತಾಲೂಕು ಸಮಾಜ ಕಲ್ಯಾಣ ಅಧಿಕಾರಿ ಬಾಲಕೃಷ್ಣ ರೈ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net