

ಕುಂದಾಪುರ: ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಭಾರತದ ಮಾಜಿ ಉಪಪ್ರಧಾನಿ ಡಾ.ಬಾಬು ಜಗಜೀವನ್ ರಾಂ 118ನೇ ಜನ್ಮದಿನ ಶನಿವಾರ ಆಚರಿಸಲಾಯಿತು.
ಶಾಸಕ ಕಿರಣ್‌ಕುಮಾರ್ ಕೊಡ್ಗಿ ಕಾರ್ಯಕ್ರಮ ಉದ್ಘಾಟಿಸಿ ಡಾ.ಬಾಬು ಜಗಜೀವನ್‌ರಾಮ್ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು.
ಕುಂದಾಪುರ ತಹಸೀಲ್ದಾರ್ ಪ್ರದೀಪ್ ಕುರ್ಡೇಕರ್, ತಾಪಂ ಇಒ ಡಾ.ರವಿಕುಮಾರ್ ಹುಕ್ಕೇರಿ, ಪುರಸಭೆ ಮುಖ್ಯಾಧಿಕಾರಿ ಆನಂದ್, ಸ್ಥಾಯಿ ಸಮಿತಿ ಅಧ್ಯಕ್ಷ ಪ್ರಭಾಕರ್, ತಾಲೂಕು ಆರೋಗ್ಯಾಕಾರಿ ಡಾ.ಪ್ರೇಮಾನಂದ್, ತಾಲೂಕು ಸರ್ಕಾರಿ ನೌಕರರ ಸಂಘ ಅಧ್ಯಕ್ಷ ಡಾ.ನಾಗೇಶ್, ದಲಿತ ಸಂಘಟನೆಗಳ ಮುಖಂಡರಾದ ರಾಜು ಬೆಟ್ಟಿನಮನೆ, ಉದಯಕುಮಾರ್ ತಲ್ಲೂರು, ಮೋಹನ್‌ಚಂದ್ರ ಕಾಳಾವರ್ಕರ್, ಸುರೇಶ್ ಹಕ್ಲಾಡಿ, ಮಂಜುನಾಥ್ ಹಟ್ಟಿಯಂಗಡಿ, ಮಂಜುನಾಥ್ ಗಿಳಿಯಾರು, ಶ್ಯಾಮ್‌ಸುಂದರ್, ಮಂಜುನಾಥ ಗುಜ್ಜಾಡಿ, ಸಮಾಜ ಕಲ್ಯಾಣ ಇಲಾಖೆ ಕಚೇರಿ ಅಧೀಕ್ಷಕಿ ಲಾವಣ್ಯ, ವಿವಿಧ ಇಲಾಖೆಯ ಅಧಿಕಾರಿಗಳು, ಹಾಸ್ಟೆಲ್ ಪಾಲಕರು ಉಪಸ್ಥಿತರಿದ್ದರು. ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ರಮೇಶ್ ಕುಲಾಲ್ ಕಾರ್ಯಕ್ರಮ ನಿರೂಪಿಸಿದರು.