ಕೃಷಿ ಕ್ಷೇತ್ರಕ್ಕೆ ಬಾಬೂಜಿ ಅಪಾರ ಕೊಡುಗೆ

Oplus_131072
ನಂಜನಗೂಡು ಪಟ್ಟಣದ ಶ್ರೀಕಂಠೇಶ್ವರ ದಾಸೋಹ ಭವನದ ಆವರಣದಲ್ಲಿ ಆಯೋಜಿಸಿದ್ದ ಡಾ.ಬಾಬು ಜಗಜೀವನ ರಾಮ್ ಅವರ ಜಯಂತಿ ಕಾರ್ಯಕ್ರಮದಲ್ಲಿ ಡಾ.ಯತೀಂದ್ರ ಸಿದ್ದರಾಮಯ್ಯ, ದರ್ಶನ್ ಧ್ರುವನಾರಾಯಣ, ಡಾ.ತಿಮ್ಮಯ್ಯ, ಶಿವಕುಮಾರ್ ಕಾಸನೂರು, ಬಾಪೂಜಿ ಸೇನೆ ಅಧ್ಯಕ್ಷ ಚಂದ್ರು ಇತರರಿದ್ದರು.
Published on

ನಂಜನಗೂಡು: ತಾಲೂಕು ಆಡಳಿತ ಹಾಗೂ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯಿಂದ ಪಟ್ಟಣದಲ್ಲಿ ಹಸಿರು ಕ್ರಾಂತಿಯ ಹರಿಕಾರ ಡಾ.ಬಾಬು ಜಗಜೀವನ ರಾಮ್ ಅವರ 118ನೇ ಜನ್ಮದಿನ ಕಾರ್ಯಕ್ರಮವನ್ನು ಆಚರಿಸಲಾಯಿತು.

ಪಟ್ಟಣದ ಜೂನಿಯರ್ ಕಾಲೇಜು ಆವರಣದಿಂದ ಶ್ರೀಕಂಠೇಶ್ವರ ದೇವಸ್ಥಾನದವರೆಗೆ ಬಾಪೂಜಿ ಅವರ ಭಾವಚಿತ್ರವನ್ನು ಮೆರವಣಿಗೆ ಮಾಡಲಾಯಿತು.

ಬಳಿಕ ನಡೆದ ವೇದಿಕೆ ಕಾರ್ಯಕ್ರಮದಲ್ಲಿ ಶಾಸಕ ದರ್ಶನ್ ಧ್ರುವನಾರಾಯಣ ಮಾತನಾಡಿ, ಡಾ.ಬಾಬು ಜಗಜೀವನರಾಮ್ ಅವರು ಸಮಾಜಕ್ಕೆ ದೊಡ್ಡ ಕೊಡುಗೆ ನೀಡಿದ್ದಾರೆ. ಕೃಷಿ ಮಂತ್ರಿಯಾಗಿದ್ದಾಗ ದೇಶದಲ್ಲಿ ದೊಡ್ಡ ಬದಲಾವಣೆ ಮಾಡಿ ಹಸಿರು ಕ್ರಾಂತಿಯ ಹರಿಕಾರ ಎಂದು ಹೆಸರಾದರು. ಜಯಂತಿ ಒಂದು ದಿನಕ್ಕೆ ಮಾತ್ರ ಸೀಮಿತವಾಗಬಾರದು. ನಿರಂತರವಾಗಿ ನಡೆಯುತ್ತಿರಬೇಕು. ಸಮಾಜದ ಬಂಧುಗಳು ತಮ್ಮ ಮಕ್ಕಳಿಗೆ ಹೆಚ್ಚಿನ ಶಿಕ್ಷಣ ನೀಡುವತ್ತ ಗಮನ ಹರಿಸಬೇಕು ಎಂದು ಹೇಳಿದರು.

ವಿಧಾನ ಪರಿಷತ್ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ ಮಾತನಾಡಿ, ಸಮಾಜಕ್ಕೆ ಒಂದು ಸಮುದಾಯ ಭವನ ನಿರ್ಮಾಣಕ್ಕೆ 2 ಕೋಟಿ ರೂ. ಅನುದಾನವನ್ನು ಕೊಡಿಸುವುದಾಗಿ ಭರವಸೆ ನೀಡಿದರು. ಬಾಬೂಜಿ ಅವರು ದಲಿತ ಸಮುದಾಯದಿಂದ ಬಂದವರಾಗಿದ್ದು, ಅಂಬೇಡ್ಕರ್ ಅವರಂತೆ ಶೋಷಣೆಗೆ ಒಳಗಾಗಿದ್ದರು. ಶಾಲಾ ಮಟ್ಟದಲ್ಲಿ ಜಾತಿ ವ್ಯವಸ್ಥೆಯ ಬಗ್ಗೆ ಹೋರಾಟ ನಡೆಸಿದ್ದರು. ಇತ್ತೀಚೆಗೆ ಜಾತಿಯ ಶೋಷಣೆ ಕಡಿಮೆಯಾಗಿದೆ. ಕಾರಣ ಸಂವಿಧಾನ ಎಂದರು.

ಪಿಯುಸಿ ಪರೀಕ್ಷೆಯಲ್ಲಿ ಹೆಚ್ಚಿನ ಅಂಕ ಪಡೆದ ವಿದ್ಯಾರ್ಥಿಗಳು ಹಾಗೂ ವಿವಿಧ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ ಮುಖಂಡರನ್ನು ಸನ್ಮಾನಿಸಲಾಯಿತು. ನಗರಸಭೆ ಅಧ್ಯಕ್ಷ ಶ್ರೀಕಂಠ, ಉಪಾಧ್ಯಕ್ಷ ರಿಹಾನ ಬಾನು, ತಹಸೀಲ್ದಾರ್ ಶಿವಕುಮಾರ್ ಕಾಸನೂರು, ಸಮಾಜ ಕಲ್ಯಾಣ ಅಧಿಕಾರಿ ಸಿದ್ಧಲಿಂಗ, ವಿಧಾನ ಪರಿಷತ್ ಸದಸ್ಯ ಡಾ.ತಿಮ್ಮಯ್ಯ, ಬಾಬೂಜಿ ಯುವಸೇನೆ ಟ್ರಸ್ಟ್ ಅಧ್ಯಕ್ಷ ಚಂದ್ರು, ಚಿಕ್ಕಣ್ಣ, ಚೆನ್ನಪ್ಪ, ಶಿವಕುಮಾರ್, ಸ್ವಾಮಿ, ಸಿದ್ದಪ್ಪ, ಶರಣ್ ಕುಮಾರ್, ಚಂದ್ರಶೇಖರ, ಪ್ರಕಾಶ್, ರಾಜು, ಬಸಪ್ಪ, ನಾಗೇಂದ್ರ, ರವಿ, ದಾಸ ಪ್ರಕಾಶ್, ನಿಂಗರಾಜು ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net