ಬೆಳ್ತಂಗಡಿ: ಕಾಡಾನೆ ಮರಿ ತೋಟದಲ್ಲೇ ಬಾಕಿ

ele
Published on

ಬೆಳ್ತಂಗಡಿ: ಕಾಡಿನಿಂದ ತೋಟಕ್ಕೆ ನುಗ್ಗಿದ ಆನೆಗಳ ಹಿಂಡೊಂದರ ಆನೆಮರಿ ಹಿಂದೆ ಹೋಗಲಾಗದೆ ತೋಟದಲ್ಲಿ ಉಳಿದ ಘಟನೆ ಅ.29ರ ರಾತ್ರಿ ಕಡಿರುದ್ಯಾವರದಲ್ಲಿ ನಡೆದಿದೆ.

ಕಡಿರುದ್ಯಾವರ ಗ್ರಾಮದ ಡೀಕಯ್ಯ ಗೌಡರವರ ತೋಟಕ್ಕೆ ನುಗ್ಗಿದ ಆನೆಗಳ ಹಿಂಡು ಕೃಷಿಯನ್ನು ತಿಂದು ಸಂಪೂರ್ಣ ನಾಶ ಮಾಡಿದೆ. ತೋಟದಿಂದ ಕಾಡಿಗೆ ಹೋಗುವ ಸಮಯದಲ್ಲಿ ಮರಿಯಾನೆಗೆ ಹೋಗಲು ಸಾಧ್ಯವಾಗದೆ ತೋಟದಲ್ಲೇ ಬಾಕಿಯಾಯಿತು ಎಂದು ತಿಳಿದು ಬಂದಿದೆ.

ಬೆಳಗ್ಗೆ ತೋಟದ ಮಾಲೀಕರು ಹೋದಾಗ ವಿಷಯ ಗೊತ್ತಾಗಿದ್ದು, ಅರಣ್ಯ ಇಲಾಖೆಗೆ ಮಾಹಿತಿ ನೀಡಲಾಗಿದೆ. ಸುದ್ದಿ ತಿಳಿದು ಅದನ್ನು ನೋಡಲು ಜನರು ಬರುತ್ತಿದ್ದಾರೆ. ಸ್ಥಳಕ್ಕೆ ಅರಣ್ಯ ಇಲಾಖೆ ತ್ಯಾಗರಾಜ್ ಮತ್ತು ಸಿಬ್ಬಂದಿ ಧಾವಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net