ಕಸದ ತೊಟ್ಟಿಯಲ್ಲಿ ಪತ್ತೆಯಾಯ್ತು ಮುದ್ದಾದ ಹೆಣ್ಣುಮಗು; ಆಸ್ಪತ್ರೆಗೆ ದಾಖಲಿಸಿದ ಸ್ಥಳೀಯರು

Child 18 Feb 20
Published on

ಮೈಸೂರು: ನಗರದ ವಿದ್ಯಾರಣ್ಯಪುರಂನಲ್ಲಿರುವ ಸುಯೋಜ್​ ಫಾರಂ ಬಳಿ ಕಸದ ತೊಟ್ಟಿಯಲ್ಲಿ ಹೆಣ್ಣುಮಗುವೊಂದು ಪತ್ತೆಯಾಗಿದೆ. ಮಗುವಿಗೆ ಎಂಟು ತಿಂಗಳು ಆಗಿರಬಹುದು ಎಂದು ಹೇಳಲಾಗಿದೆ.

ಈ ಮಗುವನ್ನು ರಕ್ಷಿಸಿರುವ ವಿದ್ಯಾರಣ್ಯಪುರ ನಿವಾಸಿಗಳು, ಪ್ರಾಥಮಿಕ ಆರೈಕೆ ಮಾಡಿ ಅದನ್ನು ಆಸ್ಪತ್ರೆಗೆ ಸೇರಿಸಿದ್ದಾರೆ.

ಸ್ಥಳಕ್ಕೆ ಭೇಟಿ ನೀಡಿದ ವಿದ್ಯಾರಣ್ಯಪುರಂ ಠಾಣೆಯ ಪೊಲೀಸರು ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ. (ದಿಗ್ವಿಜಯ ನ್ಯೂಸ್​)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net