

ಮೈಸೂರು: ರಾಜ್ಯ ಸರ್ಕಾರ ಒಂದು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಡಾ.ಯತೀಂದ್ರ ಯುವ ಬ್ರಿಗೇಡ್ ಹಾಗೂ ಕೃಷ್ಣರಾಜ ಯುವ ಬಳಗ ವತಿಯಿಂದ ಮಂಗಳವಾರ 101 ಗಣಪತಿ ದೇವಸ್ಥಾನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೆಸರಿನಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು.
ಕೆ.ಆರ್. ಬ್ಯಾಂಕ್ ಉಪಾಧ್ಯಕ್ಷ ಬಸವರಾಜ್ ಬಸಪ್ಪ ಮಾತನಾಡಿ, ಕೇಂದ್ರದ ಬಿಜೆಪಿ ಸಕ್ರಾದ ಆಡಳಿತದಿಂದ ಜನರು ಬೇಸತ್ತು ಹೋಗಿದ್ದಾರೆ. ಈ ಹಿನ್ನೆಲೆಯಲ್ಲಿ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ದೇಶದ ಮತದಾರರು ಬಿಜೆಪಿಯನ್ನು ತಿರಸ್ಕರಿಸುವುದು ನಿಶ್ಚಿತ ಎಂದು ಭವಿಷ್ಯ ನುಡಿದರು.
ಈ ಸಂದರ್ಭ ಕೆಪಿಸಿಸಿ ಸದಸ್ಯ ನಜರ್‌ಬಾದ್ ನಟರಾಜ್, ಕಾಂಗ್ರೆಸ್ ಮುಖಂಡ ಜೆ.ಜೆ. ಆನಂದ್, ಡಾ.ಯತೀಂದ್ರ ಯುವ ಬ್ರಿಗೇಡ್ ಅಧ್ಯಕ್ಷ ಗೌರಿಶಂಕರ್, ಪಕ್ಷದ ಪ್ರಮುಖರಾದ ಶಿವಕುಮಾರ್, ಎಚ್.ಎಸ್. ದಿನೇಶ್, ರವಿಚಂದ್ರ, ವರುಣ ಮಹದೇವ್, ಶಿವಕುಮಾರ್, ನವೀನ್ ಕೆಂಪಿ, ರವಿತೇಜ, ವಿನಯ್ ಕಣಗಾಲ್, ನವೀನ್ ಹಾಗೂ ಇತರರು ಇದ್ದರು.