

ಮಂಡ್ಯ: ಪಂಚಮಸಾಲಿ ಸಮುದಾಯವನ್ನು ಪ್ರವರ್ಗ-2ಎ ಮೀಸಲಾತಿ ಪಟ್ಟಿಗೆ ಸೇರಿಸದಂತೆ ಒತ್ತಾಯಿಸಿ ಹಿಂದುಳಿದ ಜಾತಿಗಳ ಒಕ್ಕೂಟ ಮತ್ತು ಕರ್ನಾಟಕ ಶೋಷಿತ ಸಮುದಾಯಗಳ ಮಹಾ ಒಕ್ಕೂಟದ ಸಹಯೋಗದಲ್ಲಿ ಡಿ.18ರಂದು ಬೆಳಗ್ಗೆ 10.30ಕ್ಕೆ ಬೆಳಗಾವಿ ಸುವರ್ಣಸೌಧದ ಎದುರು ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಒಕ್ಕೂಟದ ಕಾರ್ಯಾಧ್ಯಕ್ಷ ಎಲ್.ಸಂದೇಶ್ ತಿಳಿಸಿದರು.
ಪ್ರವರ್ಗ-2ಎ ಮೀಸಲಾತಿಯಲ್ಲಿ ಇರುವ 108 ಜಾತಿಗಳ ಸಮುದಾಯಗಳು ರಾಜಕೀಯ, ಆರ್ಥಿಕ ಹಾಗೂ ಶೈಕ್ಷಣಿಕವಾಗಿ ಇನ್ನು ಪ್ರಗತಿ ಕಾಣದೆ ಇದೆ. ಮುಂದುವರೆದ ಜಾತಿಗಳನ್ನು ಸದರಿ ಮೀಸಲಾತಿ ಪಟ್ಟಿಗೆ ಸೇರಿಸುವುದರಿಂದ ಹಾಲಿ ಇರುವ ಜಾತಿಗಳಿಗೆ ಅನ್ಯಾಯವಾಗಲಿದೆ ಎಂದು ಸುದ್ದಿಗೋಷ್ಠಿಯಲ್ಲಿ ಆತಂಕ ವ್ಯಕ್ತಪಡಿಸಿದರು.
ಕುರುಬರ ಸಂಘದ ಮಾಜಿ ಪ್ರಧಾನ ಕಾರ್ಯದರ್ಶಿ ದೊಡ್ಡಯ್ಯ, ಸಂಘಟನಾ ಕಾರ್ಯದರ್ಶಿ ರಮೇಶ್, ಜಿ.ಪಂ ಮಾಜಿ ಅಧ್ಯಕ್ಷ ಲಿಂಗಯ್ಯ, ವಿಶ್ವಕರ್ಮ ಸಮಾಜದ ಸತೀಶ್, ಮರಿಹೆಗ್ಗಡೆ, ಶಕುಂತಲಾ, ಎಂ.ಎಸ್.ರಾಜಣ್ಣ ಹಾಜರಿದ್ದರು.