ನೂತನ ಗರ್ಭಗುಡಿಗೆ ಶಿಲಾನ್ಯಾಸ : ಬಡಗಬೆಳ್ಳೂರು ಶ್ರೀ ಆದಿಶಕ್ತಿ ಚಾಮುಂಡೇಶ್ವರಿ ದೇವಸ್ಥಾನ

shilanyasa
Published on

ಬಂಟ್ವಾಳ: ಬಡಗಬೆಳ್ಳೂರು ಶ್ರೀ ಆದಿಶಕ್ತಿ ಚಾಮುಂಡೇಶ್ವರಿ ದೇವಸ್ಥಾನದ ನೂತನ ಗರ್ಭಗುಡಿಯ ಶಿಲಾನ್ಯಾಸ ಸಮಾರಂಭ ಗುರುವಾರ ಬೆಳಗ್ಗೆ ದೇವಸ್ಥಾನದ ತಂತ್ರಿ ಶ್ರೀ ವಿಷ್ಣುಮೂರ್ತಿ ತಂತ್ರಿ ಎಡಪದವು ಹಾಗೂ ವಾಸ್ತುಶಿಲ್ಪಿ ಮಹೇಶ್ ಮುನಿಯಂಗಳ ಮಾರ್ಗದರ್ಶನದಲ್ಲಿ ನೆರವೇರಿತು.

ಬಳಿಕ ನಡೆದ ಧಾರ್ಮಿಕ ಸಭೆಯಲ್ಲಿ ಪೊಳಲಿ ರಾಮಕೃಷ್ಣ ತಪೋವನದ ಸ್ವಾಮಿ ವಿವೇಕಚೈತನ್ಯಾನಂದಜಿ ಆಶೀರ್ವಚನ ನೀಡಿದರು. ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಭುವನೇಶ್ ಪಚ್ಚಿನಡ್ಕ ಅಧ್ಯಕ್ಷತೆ ವಹಿಸಿದ್ದರು.

ಮಾಜಿ ಸಚಿವ ಬಿ.ರಮಾನಾಥ ರೈ, ಬೆಳ್ಳೂರು ಶ್ರೀ ಕಾವೇಶ್ವರ ದೇವಸ್ಥಾನದ ಆಡಳಿತ ಮೊಕ್ತೇಸರ ರಘು ಎಲ್.ಶೆಟ್ಟಿ, ಬಡಗಬೆಳ್ಳೂರು ಗ್ರಾ.ಪಂ. ಅಧ್ಯಕ್ಷೆ ರೂಪಾಶ್ರೀ ನಾರಾಯಣ ನಾಯ್ಕ, ಬಂಟ್ವಾಳ ನಗರ ಯೋಜನಾ ಪ್ರಾಧಿಕಾರ ಅಧ್ಯಕ್ಷ ಬೇಬಿ ಕುಂದರ್, ಜಿ.ಪಂ. ಮಾಜಿ ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ ತುಂಬೆ, ಉದ್ಯಮಿ ಉಮೇಶ್ ಸಾಲ್ಯಾನ್ ಬೆಂಜನಪದವು, ಜಿಲ್ಲಾ ಬಿಜೆಪಿ ಕಾರ್ಯದರ್ಶಿ ದೇವಪ್ಪ ಪೂಜಾರಿ ಬಾಳಿಕೆ, ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಚಂದ್ರಶೇಖರ ಭಂಡಾರಿ ಅಮ್ಮುಂಜೆ, ಕೃಷ್ಣಪ್ರಸಾದ್ ರೈ ಬೆಳ್ಳೂರುಗುತ್ತು, ಬೆಂಜನಪದವು ಶ್ರೀ ಭದ್ರಕಾಳಿ ಕ್ಷೇತ್ರದ ಧರ್ಮದರ್ಶಿ ರಮೇಶ್ ಭಾಗವಹಿಸಿದ್ದರು.

ಕ್ಷೇತ್ರದ ಟ್ರಸ್ಟಿ ಸಂದೀಪ್ ಕುಮಾರ್, ಅರ್ಚಕ ರಮೇಶ್ ಪೂಜಾರಿ ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು. ಜೀರ್ಣೋದ್ಧಾರ ಸಮಿತಿಯ ಪ್ರಧಾನ ಕಾರ್ಯದರ್ಶಿ ಚಂದ್ರಹಾಸ ಪಲ್ಲಿಪಾಡಿ ಪ್ರಸ್ತಾವನೆಗೈದರು. ಶಶಿಕಿರಣ್ ಪೂಜಾರಿ ಬೆಳ್ಳೂರು ಸ್ವಾಗತಿಸಿದರು. ದಿನೇಶ್ ವರಕೋಡಿ ಕಾರ್ಯಕ್ರಮ ನಿರ್ವಹಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net