

ಉಡುಪಿ: ರಾಜಕೀಯ ಮತ್ತು ಬ್ಯಾಂಕಿಂಗ್ ಕ್ಷೇತ್ರದಲ್ಲಿ ಬೆಳೆಯಲು ಜನರ ವಿಶ್ವಾಸಕ್ಕೆ ಚ್ಯುತಿ ಬರದಂತೆ ಕಾರ್ಯನಿರ್ವಹಿಸುವುದು ಅತೀ ಅಗತ್ಯ. ಬದುಕು ಸರಳೀಕೃತಗೊಂಡಿದ್ದು, ಯಾಂತ್ರೀಕೃತ ಜಗತ್ತಿನಲ್ಲಿ ಬ್ಯಾಂಕಿಂಗ್ ಕ್ಷೇತ್ರ ಡಿಜಿಟಲೀಕರಣದತ್ತ ವೇಗವಾಗಿ ದಾಪುಗಾಲು ಹಾಕುತ್ತಿದೆ ಎಂದು ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಹೇಳಿದರು.
ಭಾನುವಾರ ಪುರಭವನದಲ್ಲಿ ಬಡಗಬೆಟ್ಟು ಕ್ರೆಡಿಟ್ ಕೋ&ಆಪರೇಟಿವ್ ಸೊಸೈಟಿ ಸಂಘದ ಸದಸ್ಯರಿಗೆ ಕಲ್ಪಿಸಿದ ನೂತನ ಸೌಲಭ್ಯಗಳಾದ 'ಚೇತನಾ" ಮೊಬೈಲ್ ಆಪ್, ಪೇ-ಡೈರೆಕ್ ಎ.ಟಿ.ಎಮ್ ಕಾರ್ಡ್, ಪಿಗ್ಮಿ ಕಲೆಕ್ಷನ್ ಮೊಬೈಲ್ ಆ್ಯಪ್ ಅನಾವರಣಗೊಳಿಸಿ ಅವರು ಮಾತನಾಡಿದರು.
ಶಾಸಕರಾಗಿ ಆಯ್ಕೆಯಾದ ಸಂಘದ ಸದಸ್ಯ ಗುರ್ಮೆ ಸುರೇಶ್ ಶೆಟ್ಟಿ, ಕ್ರೆಡೈ ಅಧ್ಯಕ್ಷರಾಗಿ ಆಯ್ಕೆಯಾಗಿದ ಮನೋಹ ಎಸ್. ಶೆಟ್ಟಿ, ಸಮಾಜ ಸೇವಕ ಈಶ್ವರ್ ಮಲ್ಪೆ, ಗಿನ್ನೆಸ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ನಲ್ಲಿ ಹೊಸ ದಾಖಲೆ ಬರೆದಿರುವ ತನುಶ್ರೀ ಪಿತ್ರೋಡಿ ಅವರನ್ನು ಸಂಘದ ವತಿಯಿಂದ ಗೌರವಿಸಲಾಯಿತು.
ಮಾಜಿ ಶಾಸಕ ಕೆ. ರುಪತಿ ಭಟ್ ಮಾತನಾಡಿದರು. ಕೋಡ್ಲಾಗ್ಸ್ ಟೆಕ್ನಾಲಜೀಸ್ ವ್ಯವಸ್ಥಾಪಕ ಶ್ರವಣ್ ರವಿರಾಜ್ ನೂತನ ಮೊಬೈಲ್ ಆ್ಯಪ್ ವೈಶಿಷ್ಟ$್ಯ ಹಾಗೂ ಬಳಕೆಯ ಬಗ್ಗೆ ಮಾಹಿತಿ ನೀಡಿದರು. ಐ.ಸಿ.ಐ.ಸಿ.ಐ ಬ್ಯಾಂಕಿನ ಸೀನಿಯರ್ ಚೀಫ್ ಮೆನೇಜರ್ ಮಂಜುನಾಥ್ ಪೇ&-ಡೈರೆಕ್ಟ್ ಎ.ಟಿ.ಎಂ ಕಾರ್ಡ್ನ ಕುರಿತು ಮಾಹಿತಿ ನೀಡಿದರು. ಸೊಸೈಟಿಯ ಪ್ರಾಯೋಜಕತ್ವದಲ್ಲಿ ಚೇತನಾ ನವೋದಯ ಸ್ವಸಹಾಯ ಗುಂಪುಗಳನ್ನು ಉದ್ಘಾಟಿಸಲಾಯಿತು.
ಸೊಸೈಟಿ ಅಧ್ಯಕ್ಷ ಸಂಜೀವ ಕಾಂಚನ್ ಅಧ್ಯಕ್ಷತೆ ವಹಿಸಿದ್ದರು. ಉಡುಪಿ ಜಿಲ್ಲಾ ಸಹಕಾರ ಯೂನಿಯನ್ ಅಧ್ಯಕ್ಷ ಬಿ.ಜಯಕರ ಶೆಟ್ಟಿ ಇಂದ್ರಾಳಿ, ಉದಯ ಕೃಷ್ಣ್ಣಯ್ಯ ಶೆಟ್ಟಿ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಮುನಿಯಾಲು ಉದಯ ಕುಮಾರ್ ಶೆಟ್ಟಿ, ಐ.ಸಿ.ಐ.ಸಿ.ಐ ಬ್ಯಾಂಕಿನ ಡೆಪ್ಯುಟಿ ಜನರಲ್ ಮೆನೇಜರ್ ಅಭಿತಾಬ್ ದೀಕ್ಷಿತ್ ಉಪಸ್ಥಿತರಿದ್ದರು. ಪ್ರಭಾರ ಪ್ರಧಾನ ವ್ಯವಸ್ಥಾಪಕ ರಾಜೇಶ್ ವಿ. ಶೇರಿಗಾರ್ ವಂದಿಸಿದರು. ಶಾಖಾ ವ್ಯವಸ್ಥಾಪಕ ನವೀನ್ ಕೆ. ಕಾರ್ಯಕ್ರಮ ನಿರೂಪಿಸಿದರು.