ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ : ಶಾಸಕ ಅಶೋಕ್ ಕುಮಾರ್ ರೈ ಬಣ್ಣನೆ

34
Published on

ಪುತ್ತೂರು ಗ್ರಾಮಾಂತರ: ಪ್ರಸ್ತುತ ಸರ್ಕಾರಿ ಶಾಲೆಗಳಲ್ಲಿ ತರಬೇತಿ ಪಡೆದ ಶಿಕ್ಷಕರೇ ಕಾರ್ಯನಿರ್ವಹಿಸುತ್ತಿದ್ದು, ಉತ್ತಮ ಶಿಕ್ಷಣ ದೊರೆಯುತ್ತಿದೆ. ಹಾಗಾಗಿ ಸರ್ಕಾರಿ ಶಾಲೆಗಳ ಬಗ್ಗೆ ನಿರ್ಲಕ್ಷ್ಯ ಬೇಡ ಎಂದು ಶಾಸಕ ಅಶೋಕ್ ಕುಮಾರ್ ರೈ ಹೇಳಿದರು.

ಬಡಗನ್ನೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕೊಠಡಿಯನ್ನು ಶನಿವಾರ ಉದ್ಘಾಟಿಸಿ ಮಾತನಾಡಿದರು.

ಹಿರಿಯ ವಿದ್ಯಾರ್ಥಿ ಸಂದ ಗೌರವ ಸಲಹೆಗಾರ ಶ್ರೀನಿವಾಸ ಭಟ್ ಚಂದುಕೊಡ್ಲು ಧ್ವಜಾರೋಹಣಗೈದಿದ್ದರು. ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಬೊಟ್ಯಾಡಿ ಎಲ್‌ಕೆಜಿ ತರಗತಿ ಉದ್ಘಾಟಿಸಿದರು. ಬಡಗನ್ನೂರು ಗ್ರಾ.ಪಂ. ಅಧ್ಯಕ್ಷೆ ಪುಷ್ಪಲತಾ ದೇವಕಜೆ ಅಧ್ಯಕ್ಷತೆ ವಹಿಸಿದ್ದರು. ಸದಸ್ಯರಾದ ರವಿರಾಜ ರೈ ಸಜಂಕಾಡಿ, ಸಂತೋಷ್ ಆಳ್ವ ಗಿರಿಮನೆ, ಪಿಡಿಒ ಕೆ.ಪಿ.ಸುಬ್ಬಯ್ಯ, ಅಕ್ರಮ ಸಕ್ರಮ ಸಮಿತಿ ಸದಸ್ಯ ಮಹಮ್ಮದ್ ಬಡಗನ್ನೂರು, ಎಸ್‌ಡಿಎಂಸಿ ಅಧ್ಯಕ್ಷ ಬಾಬು ಮೂಲ್ಯ, ಹಿರಿಯ ವಿದ್ಯಾರ್ಥಿ ಸಂಘ ಗೌರವಾಧ್ಯಕ್ಷ ನಾರಾಯಣ ರೈ ಕುದ್ಕಾಡಿ, ಹಿರಿಯ ವಿದ್ಯಾರ್ಥಿ ಸಂಘ ಗೌರವ ಸಲಹೆಗಾರರಾದ ಬಾಲಕೃಷ್ಣ ರೈ ಕುದ್ಯಾಡಿ, ಜಯಂತ ರೈ ಕುದ್ಯಾಡಿ, ಸತೀಶ್ ರೈ ಕಟ್ಟಾವು, ಕಷ್ಣ ರೈ ಕುದ್ಯಾಡಿ, ಜನಾರ್ದನ ಪೂಜಾರಿ ಪದಡ್ಕ, ಡಾ.ರವೀಶ್ ಪಡುಮಲೆ, ಹಿರಿಯ ವಿದ್ಯಾರ್ಥಿ ಸಂಘ ಸಂಘಟನಾ ಕಾರ್ಯದರ್ಶಿ ಸಲಾವುದ್ದೀನ್ ಪದಡ್ಕ ಮತ್ತಿತರರಿದ್ದರು. ಮುಖ್ಯಶಿಕ್ಷಕಿ ಹರಿಣಾಕ್ಷಿ ಎ. ಸ್ವಾಗತಿಸಿದರು. ಹಿರಿಯ ವಿದ್ಯಾರ್ಥಿ ಸಂಘ ಅಧ್ಯಕ್ಷ ಸುರೇಶ್ ರೈ ಪಲ್ಲತ್ತಾರು ವಂದಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net