ಜಿಲ್ಲೆಗೆ ಆಕ್ಸಿಜನ್ ಪೂರೈಸಲು ಸೂಚನೆ

Siddaramaiah
Published on

ಬಾದಾಮಿ: ಬಾದಾಮಿ ಕ್ಷೇತ್ರ ಸೇರಿ ಬಾಗಲಕೋಟೆ ಜಿಲ್ಲೆಗೆ ಅಗತ್ಯವಿರುವ ಆಕ್ಸಿಜನ್, ರೆಮ್‌ಡೆಸಿವಿರ್ ಚುಚ್ಚುಮದ್ದು ಹಾಗೂ ಲಸಿಕೆಯನ್ನು ಅಗತ್ಯಕ್ಕೆ ಅನುಗುಣವಾಗಿ ಪೂರೈಸುವಂತೆ ಕ್ಷೇತ್ರದ ಶಾಸಕರೂ ಆಗಿರುವ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಸರ್ಕಾರವನ್ನು ಒತ್ತಾಯಿಸಿದರು.

ಈ ಸಂಬಂಧ ಅವರು, ರೆಮೆಡಿಸಿವಿರ್ ಪೂರೈಕೆ ಉಸ್ತುವಾರಿ ಉಪಮುಖ್ಯಮಂತ್ರಿ ಡಾ.ಅಶ್ವತ್ಥನಾರಾಯಣ, ಆಕ್ಸಿಜನ್ ಪೂರೈಕೆ ಹೊಣೆ ಹೊತ್ತಿರುವ ಸಚಿವ ಜಗದೀಶ ಶೆಟ್ಟರ್ ಅವರೊಂದಿಗೆ ದೂರವಾಣಿ ಮೂಲಕ ಮಾತುಕತೆ ನಡೆಸಿದರು. ಜತೆಗೆ ಸರ್ಕಾರದ ಮುಖ್ಯ ಕಾರ್ಯದರ್ಶಿ ರವಿಕುಮಾರ ಅವರೊಂದಿಗೂ ಚರ್ಚೆ ನಡೆಸಿ ಬಾಗಲಕೋಟೆ ಜಿಲ್ಲೆಯಲ್ಲಿ ಕರೊನಾ ಸೋಂಕಿತರಿಗೆ ತೊಂದರೆ ಆಗದಂತೆ ಬೆಡ್, ಆಕ್ಸಿಜನ್ ವ್ಯವಸ್ಥೆ ಮಾಡಲು ತಿಳಿಸಿದರು.

ಬಾದಾಮಿ, ಬಾಗಲಕೋಟೆ, ಆಕ್ಸಿಜನ್, ರೆಮ್‌ಡೆಸಿವಿರ್, ಸಿದ್ದರಾಮಯ್ಯ, ಕರೊನಾ, Badami, Bagalkot, Oxygen, Remedicavir, Siddaramaiah, Corona,

Community-verified icon
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net