ತಾಲೂಕಾಡಳಿತದಿಂದ ಸಕಲ ಸಿದ್ಧತೆ

BDM 26-1
Published on

ಬಾದಾಮಿ: ತಾಲೂಕಿನಲ್ಲಿ ಎರಡನೇ ಹಂತದಲ್ಲಿ 30 ಗ್ರಾಮ ಪಂಚಾಯಿತಿಗಳ ಸಾರ್ವತ್ರಿಕ ಚುನಾವಣೆಗೆ ಡಿ.27 ರಂದು ಬೆಳಗ್ಗೆ 7 ರಿಂದ ಸಂಜೆ 5 ಗಂಟೆವರೆಗೆ ಮತದಾನ ನಡೆಯಲಿದ್ದು ತಾಲೂಕಾಡಳಿತದಿಂದ ಎಲ್ಲ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ತಾಲೂಕು ಚುನಾವಣಾಧಿಕಾರಿ, ತಹಸೀಲ್ದಾರ್ ಸುಹಾಸ ಇಂಗಳೆ ತಿಳಿಸಿದರು.

ನಗರದ ವೀರಪುಲಿಕೇಶಿ ಸಂಸ್ಥೆಯ ಮಸ್ಟರಿಂಗ್ ಕೇಂದ್ರದಲ್ಲಿ ಮಾತನಾಡಿ, ಕೋವಿಡ್-19 ಮುಂಜಾಗ್ರತೆ ಕ್ರಮಗಳನ್ನು ಕೈಗೊಳ್ಳಲಾಗಿದೆ. 425 ಸ್ಥಾನಗಳಿಗೆ 1147 ಅಭ್ಯರ್ಥಿಗಳು ಅಂತಿಮ ಸ್ಪರ್ಧೆಯಲ್ಲಿ ಉಳಿದಿದ್ದಾರೆ. ಒಟ್ಟು 202 ಮತಗಟ್ಟೆಗಳನ್ನು ಸ್ಥಾಪಿಸಲಾಗಿದ್ದು ಪ್ರತಿ ಮತಗಟ್ಟೆ ಅಧಿಕಾರಿಗಳು, ಸಹಾಯಕ ಮತಗಟ್ಟೆ ಅಧಿಕಾರಿಗಳು, ಪ್ರೊಸಿಡಿಂಗ್ ಹಾಗೂ ಪೋಲಿಂಗ್ ಅಧಿಕಾರಿಗಳನ್ನು ನೇಮಿಸಲಾಗಿದೆ. ಕೋವಿಡ್ ಸುರಕ್ಷತಾ ಕಿಟ್‌ಗಳನ್ನು ವಿತರಿಸಲಾಗಿದೆ. 74641 ಪುರುಷ, 73248 ಮಹಿಳಾ, 10 ಇತರ ಸೇರಿ 147899 ಮತದಾರರಿದ್ದಾರೆ ಎಂದು ತಿಳಿಸಿದರು.

EndFragment

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net